Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು: HDK

26/11/2025 3:54 PM

BIG NEWS : ನಾಳೆ, ನಾಡಿದ್ದು ಹೈಕಮಾಂಡ್ ಸಭೆ, ರಾಜ್ಯದ ಗೊಂದಲದ ಬಗ್ಗೆ ಅಂತಿಮ ತೀರ್ಮಾನ : ಪ್ರಿಯಾಂಕ್ ಖರ್ಗೆ

26/11/2025 3:52 PM

SHOCKING: ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ‘SSLC ವಿದ್ಯಾರ್ಥಿನಿ’

26/11/2025 3:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ `ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ನಿರ್ಣಯಗಳು ಹೀಗಿವೆ | Cabinet meeting
KARNATAKA

BIG NEWS : `CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ `ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ನಿರ್ಣಯಗಳು ಹೀಗಿವೆ | Cabinet meeting

By kannadanewsnow5725/01/2025 9:51 AM

ಬೆಂಗಳೂರು: ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ತಿಳಿಸಿದರು.

ಬೆಂಗಳೂರು ಅರಮನೆ ಮೈದಾನದ ಒಟ್ಟು 472 ಎಕರೆ 16 ಗುಂಟೆ ಜಾಗಕ್ಕೆ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ ಕಂಡಿಕೆ 8 ಮತ್ತು 9ರಲ್ಲಿ ರೂ.11.00 ಕೋಟಿಗಳನ್ನು ನಿಗದಿಗೊಳಿಸಲಾಗಿತ್ತು.13-3-1997 ರಂದು ಸದರಿ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯವು ಎತ್ತಿಹಿಡಿದಿರುತ್ತದೆ. 27 ವರ್ಷಗಳ ನಂತರ ಈ ವ್ಯಾಜ್ಯ ಮುಂಚೂಣಿಗೆ ಬಂದಿದ್ದು, 1996 ರಲ್ಲಿ 472 ಎಕರೆ 16 ಗುಂಟೆ ಜಾಗಕ್ಕೆ ರೂ.11.00 ಕೋಟಿಗಳನ್ನು (ಪ್ರತಿ ಎಕರೆಗೆ 2.30ಲಕ್ಷ ರೂ. ಅಂದಾಜು ಮೊತ್ತ)ನಿಗದಿಗೊಳಿಸಲಾಗಿತ್ತು. 1996ರ ಈ ಕಾಯ್ದೆಗೆ ಮಾನ್ಯ ಸರ್ವೋಚ್ಛ ನ್ಯಾಯಾಲಯದಿಂದ ಯಾವುದೇ ತಡೆಯಾಜ್ಞೆ ಇಲ್ಲ. ಆದರೆ, ದಿನಾಂಕ: 10.12.2024ರ ಮಾನ್ಯ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಮತ್ತುಇತರೆ ಪ್ರಕರಣಗಳಲ್ಲಿ ಕರ್ನಾಟಕ ಸ್ಟಾಂಪ್ ಕಾಯ್ದೆಯ ಸೆಕ್ಷನ್ 45ಬಿ ಗೆ ಅನುಗುಣವಾಗಿ ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಂತಹ ಪ್ರದೇಶಗಳಿಗೆ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಬೆಂಗಳೂರು ಅರಮನೆ ಜಾಗವನ್ನು ಮೌಲ್ಯೀಕರಿಸಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ನೀಡುವಂತೆ ನಿರ್ದೇಶಿಸಿದೆ.

ರಾಜ್ಯದಲ್ಲಿ ಕೇವಲ 2 ಕಿ.ಮೀ ರಸ್ತೆ ಅಭಿವೃದ್ಧಿಗೆ ರೂ.3014.00 ಕೋಟಿ ಅಂದರೆ ಪ್ರತಿ ಎಕರೆಗೆ ರೂ.200.00 ಕೋಟಿ ನೀಡಿದರೆ ಆರ್ಥಿಕ ಪರಿಸ್ಥಿತಿ ಗಂಡಾಂತರ ಉಂಟಾಗಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗದೇ ಪ್ರಗತಿ ವಿರೋಧವಾದ ಕ್ರಮವಾಗುತ್ತದೆ. 1996ರ ಕಾಯ್ದೆಗೆ ಪೂರಕವಾದ ಈ ಸುಗ್ರಿವಾಜ್ಞೆಯನ್ನು ರಾಜ್ಯಪಾಲರಿಗೆ ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಸಚಿವರು ತಿಳಿಸಿದರು.

ಮಾರುಕಟ್ಟೆ ಮೊತ್ತ ಒಂದು ಕಡೆಯಾದರೆ, ಸರ್ಕಾರ ಈಗಾಗಲೇ ಪಡೆದಿರುವುದಕ್ಕೆ ನಿಗದಿ ಮಾಡಿರುವ ಮೊತ್ತ ಬೇರೆಯಿದೆ. ಅಭಿವೃದ್ಧಿ ಕಾಮಗಾರಿಗಳು ಜಾರಿಯಲ್ಲಿರುವಾಗ ಈ ವ್ಯಾಜ್ಯದಿಂದ ಕರ್ನಾಟಕ ಸರ್ಕಾರ ಸುಮಾರು 3014 ಕೋಟಿ ರೂಪಾಯಿ ಗಳನ್ನು 15.36 ಗಂಟೆ ಭೂಮಿಗೆ ಕೊಡಬೇಕಾಗಿ ಬರುತ್ತದೆ. ಇದು ಅತ್ಯಂತ ಅವ್ಯವಹಾರಿಕ.ಇದನ್ನು ಜಾರಿ ಮಾಡಿದರೆ ಅಭಿವೃದ್ಧಿಗೆ ಗಂಡಾಂತರ ಬರಲಿದೆ. 3014 ಕೋಟಿ ಕಡಿಮೆ ಮೊತ್ತವಲ್ಲ. ಈ ಮೊತ್ತವನ್ನು ಕೊಡಲಾಗುವುದಿಲ್ಲವಾದ್ದರಿಂದ ಅರಮನೆಯ ಭೂಮಿಯನ್ನು ತೆಗೆದುಕೊಳ್ಳುವುದು ಅಥವಾ ಬಿಡುವುದರ ಬಗ್ಗೆ ಅಧ್ಯಾದೇಶದ ಮೂಲಕ ನಿರ್ಧಾರ ಮಾಡಲು ಅಧ್ಯಾದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ ಬೊಕ್ಕಸವನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ ಹಿಂದೆ ಮಾಡಿರುವ ಕಾನೂನು ಅನ್ವಯ ಅದನ್ನು ಮುಂದುವರೆಸುವ ದೃಷ್ಟಿಯಿಂದ ಅಧ್ಯಾದೇಶ ಹೊರಡಿಸಿದೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ಕಾರ್ಯಕಲಾಪ ನಿರ್ಣಯಗಳ ಪ್ರಕಾರ ಯಾವುದಾದರೂ ನಿರ್ಣಯ ಅಥವಾ ಪ್ರಸ್ತಾವನೆಗಳನ್ನು .ನಮ್ಮ ನಿರ್ಧಾರ ರಾಜ್ಯ ಸರ್ಕಾರದ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ. ಸುಗ್ರಿವಾಜ್ಞೆ ಜಾರಿ ಮಾಡುವುದರಿಂದ ಅಗತ್ಯವಿರುವಷ್ಟು ಜಾಗವನ್ನು ಬಳಸಿಕೊಳ್ಳಲು ಮತ್ತು ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ದೊರೆಯುತ್ತದೆ. ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಸರ್ಕಾರವು ಈ ಮೊದಲು ಕೈಗೊಂಡ ಯಾವುದೇ ತೀರ್ಮಾನದಂತೆ ಯಾವುದೇ ಮೂಲಸೌಕರ್ಯ ಯೋಜನೆಯಿಂದ ಭಾಗಶ: ಅಥವಾ ಸಂಪೂರ್ಣವಾಗಿ ಹಿಂದೆ ಸರಿಯಲು ಈ ಸುಗ್ರಿವಾಜ್ಞೆ ಅವಕಾಶ ಕಲ್ಪಿಸುತ್ತದೆ ಎಂದು ಸಚಿವರು ವಿವರಿಸಿದರು.

15 ಎಕರೆಗೆ 3000 ಕೋಟಿಗಳನ್ನು ಕೊಡಲು ಸಾಧ್ಯವಿಲ್ಲ. 11 ಎಕರೆ ಜಾಗವನ್ನು 1996ರಲ್ಲಿಯೇ ಕೋಟಿಗಳನ್ನು ಕೊಟ್ಟು ಪಡೆಯಲಾಗಿದೆ. ಈ ಸಮಸ್ಯೆಗಳು ವ್ಯಾಜ್ಯಗಳು ಪರಿಹಾರವಾಗದ ಕಾರಣ ಉಂಟಾಗಿದೆ. ಟಿ.ಡಿ.ಆರ್ ಕೊಡದಿರಲು ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

2011ರಲ್ಲಿ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ ಆಸ್ತಿಯ 15 ಎಕರೆ 39 ಗುಂಟೆ ಜಾಗವನ್ನು ಬಳಸಿಕೊಂಡು ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಯನ್ನು ಅಗಲೀಕರಣಗೊಳಿಸುವ ಸಂಬಂಧ ಮಧ್ಯಂತರ ಅರ್ಜಿ ದಾಖಲಿಸಿದಾಗ ಸದರಿ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯವು 2014 ರಲ್ಲಿ ಟಿ.ಡಿ.ಆರ್ ನಿಯಮಗಳ ಪ್ರಕಾರ ಟಿ.ಡಿ.ಆರ್ ಷರತ್ತಿಗೊಳಪಡಿಸಿ, ಜಾಗವನ್ನು ಬಳಸಿಕೊಳ್ಳಲು ಅನುಮತಿ ನೀಡಿರುತ್ತದೆ.

ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿಗದಿಪಡಿಸಿರುವ ಭೂಸ್ವಾಧಿನ ಮೊತ್ತವು ರಾಜ್ಯದ ಮೇಲೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದ್ದು, ಆರ್ಥಿಕ ಶಿಸ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆರ್ಥಿಕ ಶಿಸ್ತಿನ ತತ್ವಗಳನ್ನು ಅನುಸರಿಸದೇ ಅಂತಹ ಮೂಲಸೌಕರ್ಯ ಯೋಜನೆಗಳ ಮೇಲೆ ನೀತಿ-ನಿರ್ಣಯಗಳನ್ನು ತೆಗೆದುಕೊಳ್ಳುವುದು ಕಷ್ಟಸಾಧ್ಯ. ನೀತಿ-ನಿಯಮಕ ವಿಷಯಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ನಿರ್ಧರಿಸುವಾಗ ರಾಜ್ಯದ ಆರ್ಥಿಕ ನೀತಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಕಾರ್ಯಸಾಧುವಲ್ಲದ ಯಾವುದೇ ಯೋಜನೆಯು ಸಾರ್ವಜನಿಕ ಹಿತಾಸಕ್ತಿಗೆ ಮತ್ತು ಸಾರ್ವಜನಿಕ ನೀತಿಗೆ ವಿರುದ್ಧವಾಗಿರುತ್ತದೆ.

ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಿವಿಲ್ ಅಪಿಲ್ನಲ್ಲಿ ರಾಜ್ಯದ ಪರವಾಗಿ ಆದೇಶವಾದಲ್ಲಿ ಮಾರಾಟ ಅಥವಾ ಇನ್ನಾವುದೇ ರೀತಿಯಲ್ಲಿ ಬಳಕೆಯಾದ ಟಿ.ಡಿ.ಆರ್ ಗಳನ್ನು ಹಿಂಪಡೆಯಲಾಗಲೀ ಅಥವಾ ಮರುಪಡೆಯಲಾಗಲೀ ಅಸಾಧ್ಯವಾಗುವುದರಿಂದ ಸುಗ್ರಿವಾಜ್ಞೆಯ ಮೂಲಕ ಅಧಿಕಾರ ಪಡೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

* ಕರ್ನಾಟಕ ಸರ್ಕಾರ ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿ:

“ಅಧ್ಯಾದೇಶಗಳು ಒಳಗೊಂಡಂತೆ ಶಾಸನಗಳ ಪ್ರಸ್ತಾವಗಳು, ಆದರೆ ಪೂರ್ಣವಾಗಿ ಔಪಚಾರಿಕ ಸ್ವರೂಪದ ಅಥವಾ ಅತೀ ಕಡಿಮೆ ಪ್ರಾಮುಖ್ಯತೆ ಹೊಂದಿರುವ ವಿಷಯಗಳೆಂದು ಮುಖ್ಯಮಂತ್ರಿಯವರು ಅಭಿಪ್ರಾಯ ಪಡುವ ಪ್ರಸ್ತಾವಗಳನ್ನು ಹೊರತುಪಡಿಸಿ” ಎಂಬ ನಿಯಮವನ್ನು ತಿದ್ದುಪಡಿ ಮಾಡಿ ತುರ್ತು ಸಂದರ್ಭಗಳಲ್ಲಿ ರಾಜ್ಯ ಸಚಿವ ಸಂಪುಟದ ಪೂರ್ವಾನುಮೋದನೆ ಇಲ್ಲದೇ ರಾಜ್ಯ ವಿಧಾನ ಮಂಡಲದಲ್ಲಿ ವಿಧೇಯಕಗಳನ್ನು ಮಂಡಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡುತ್ತದೆ. ಇಂತಹ ಪ್ರಸ್ತಾವನೆಗಳಿಗೆ ಘಟನೋತ್ತರ ಮಂಜೂರಾತಿ ಪಡೆಯಲು ಈ ತಿದ್ದುಪಡಿಯಲ್ಲಿ ಅವಕಾಶ ನೀಡುತ್ತದೆ.

ಅಭಿವೃದ್ಧಿ ಕಾಮಗಾರಿಗಳಿಗೆ ದೊಡ್ಡ ಮೊತ್ತದ ಹಣ ಕೊಟ್ಟು ರಾಜ್ಯದ ಬೊಕ್ಕಸಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ನ್ಯಾಯಯುತವಾದ ಅಭಿವೃದ್ಧಿ ಕೆಲಸಗಳಾಗಲು ಉತ್ತಮ ವಾತಾವರಣ ಸೃಷ್ಟಿಯಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಮುಖ್ಯಮಂತ್ರಿಗಳು ನಿರ್ಧಾರ ಮಾಡಿ ಬಿಲ್ ಅಥವಾ ಅಧ್ಯಾದೇಶ ಕಳಿಸುವ ಸಂದರ್ಭ ಬಂದಾಗ ಸಚಿವ ಸಚಿವ ಸಂಪುಟ ದಲ್ಲಿಟ್ಟು ನಂತರವೇ ಹೋಗಬೇಕಿತ್ತು. ರಾಜ್ಯಪಾಲರು ಮುಖ್ಯಮಂತ್ರಿಗಳ ಹಂತದಲ್ಲಿಯೇ ಆಗಬಹುದು ಎಂದಾದರೆ Transaction of Business Rules ನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಸಲಹೆ ಕೊಟ್ಟ ಮೇರೆಗೆ ವ್ಯವಹಾರ ಸುಗಮ ನಿರ್ವಹಣೆ -Transaction of Business Rules ನ್ನು ತಿದ್ದುಪಡಿ ಮಾಡಿ ಅದರ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಅಧ್ಯಕ್ಷತೆಯಲ್ಲಿ ಸಭೆ

ಮೈಕ್ರೋ ಫೈನಾನ್ಸ್ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಮುಖ್ಯಮಂತ್ರಿಗಳು ನಾಳೆಯೇ ಈ ಕುರಿತು ತುರ್ತು ಸಭೆ ಕರೆದಿದ್ದಾರೆ. ವಿಶೇಷ ಕಾನೂನು ರಚಿಸಲು ಹಾಗೂ ಶೋಷಣೆಯ ಪ್ರಕರಣಗಳನ್ನು ಮಟ್ಟ ಹಾಕಲು ಏನು ಮಾಡಬೇಕೆಂದು ನಿರ್ಧರಿಸಬೇಕಿದೆ. ಮೈಕ್ರೊ ಫೈನಾನ್ಸ್ ಏಜೆನ್ಸಿಗಳಿಂದಾಗುತ್ತಿರುವ ಶೋಷಣೆಯ ಬಗ್ಗೆ ಕಾನೂನು ರಚಿಸಲು ಸಾಧ್ಯವಾಗಿಲ್ಲ. ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್ ರೆಗ್ಯೂಲೇಶನ್ ಆಫ್ ಮನಿ ಲೆಂಡಿಂಗ್ ಬಿಲ್ ರೂಪಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ನಾಳೆ ಇದನ್ನು ಮಂಡನೆ ಮಾಡಿ ಹಲವಾರು ವಿಷಯಗಳ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗುವುದು ಎಂದರು.

ರಾಜ್ಯಪಾಲರು ಹಲವಾರು ಬಿಲ್ಲುಗಳನ್ನು ಹಿಂತಿರುಗಿಸಿರುವ ಬಗ್ಗೆ ಸ್ಪಷ್ಟೀಕರಣ ನೀಡಲಾಗುವುದು ಎಂದು ಸಚಿವರು ಇದೆ ಸಂದರ್ಭದಲ್ಲಿ ತಿಳಿಸಿದರು.

BIG NEWS : `CM ಸಿದ್ದರಾಮಯ್ಯ' ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ..! BIG NEWS: THE KEY DECISIONS OF THE STATE CABINET MEETING CHAIRED BY CM SIDDARAMAIAH ARE AS FOLLOWS | Cabinet meeting
Share. Facebook Twitter LinkedIn WhatsApp Email

Related Posts

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು: HDK

26/11/2025 3:54 PM2 Mins Read

BIG NEWS : ನಾಳೆ, ನಾಡಿದ್ದು ಹೈಕಮಾಂಡ್ ಸಭೆ, ರಾಜ್ಯದ ಗೊಂದಲದ ಬಗ್ಗೆ ಅಂತಿಮ ತೀರ್ಮಾನ : ಪ್ರಿಯಾಂಕ್ ಖರ್ಗೆ

26/11/2025 3:52 PM1 Min Read

SHOCKING: ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ‘SSLC ವಿದ್ಯಾರ್ಥಿನಿ’

26/11/2025 3:46 PM1 Min Read
Recent News

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು: HDK

26/11/2025 3:54 PM

BIG NEWS : ನಾಳೆ, ನಾಡಿದ್ದು ಹೈಕಮಾಂಡ್ ಸಭೆ, ರಾಜ್ಯದ ಗೊಂದಲದ ಬಗ್ಗೆ ಅಂತಿಮ ತೀರ್ಮಾನ : ಪ್ರಿಯಾಂಕ್ ಖರ್ಗೆ

26/11/2025 3:52 PM

SHOCKING: ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ‘SSLC ವಿದ್ಯಾರ್ಥಿನಿ’

26/11/2025 3:46 PM

ಅಂಬೇಡ್ಕರ್ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು: ಸಿಎಂ ಸಿದ್ಧರಾಮಯ್ಯ

26/11/2025 3:40 PM
State News
KARNATAKA

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು: HDK

By kannadanewsnow0926/11/2025 3:54 PM KARNATAKA 2 Mins Read

ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ…

BIG NEWS : ನಾಳೆ, ನಾಡಿದ್ದು ಹೈಕಮಾಂಡ್ ಸಭೆ, ರಾಜ್ಯದ ಗೊಂದಲದ ಬಗ್ಗೆ ಅಂತಿಮ ತೀರ್ಮಾನ : ಪ್ರಿಯಾಂಕ್ ಖರ್ಗೆ

26/11/2025 3:52 PM

SHOCKING: ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ‘SSLC ವಿದ್ಯಾರ್ಥಿನಿ’

26/11/2025 3:46 PM

ಅಂಬೇಡ್ಕರ್ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು: ಸಿಎಂ ಸಿದ್ಧರಾಮಯ್ಯ

26/11/2025 3:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.