ಮೈಸೂರು : ಕನ್ನಡದ ಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪನವರ ಚಿತಾಭಸ್ಮ ಇಂದು ವಿಸರ್ಜನೆ ಮಾಡಲಾಯಿತು. ಭೈರಪ್ಪ ಕುಟುಂಬ ಸದಸ್ಯರಿಂದ ಕಾವೇರಿ ನದಿಯಲ್ಲಿ ಭೈರಪ್ಪ ಅವರ ಅಸ್ತಿ ವಿಸರ್ಜನೆ ಮಾಡಲಾಯಿತು. ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಅಸ್ತಿ ವಿಸರ್ಜನೆ ಮಾಡಲಾಯಿತು.
ಈ ವೇಳೆ ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅವರು ಅಸ್ತಿ ವಿಸರ್ಜಸಿದರು. ಕಳೆದ ಬುಧವಾರ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಘಾತದಿಂದ ಎಸ್.ಎಲ್ ಭೈರಪ್ಪ ನಿಧನರಾಗಿದ್ದರು. ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಚಿರಶಾಂತಿ ಧಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತ್ತು.