ಬೆಂ ಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ರಾಜ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗಿದೆ. ಅಲ್ಲದೆ ಗುರುವಾರ ಅಂದರೆ ಏಪ್ರಿಲ್ 17 ರಂದು ಸಂಜೆ 4 ಗಂಟೆಗೆ ವಿಶೇಷ ಸಂಪುಟ ಸಭೆ ಕರೆಯಲಾಗಿದೆ. ಸಂಪುಟ ಸಭೆಯಲ್ಲಿ ಜಾತಿ ಗಣ ಜನಗಣತಿ ವರದಿ ಕುರಿತು ಚರ್ಚಿಸುತ್ತೇವೆ. ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ತೀವ್ರ ವಿರೋಧದ ನಡುವೆ ಸಂಪುಟದಲ್ಲಿ ಸಲ್ಲಿಕೆಯಾಗಿರುವ ವರದಿಯ ಪ್ರಮುಖ ಅಂಶಗಳನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಚಿವರಿಗೂ ಕಳುಹಿಸಿದ್ದಾರೆ. ಮುಖ್ಯಾಂಶಗಳನ್ನು ಆಧರಿಸಿ ಮುಂದಿನ ಗುರುವಾರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ವರದಿಯಲ್ಲಿನ ಅಂಶಗಳನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ಸರ್ಕಾರ ತೀರ್ಮಾನ ಮಾಡುತ್ತದೆಯೇ ? ಅಥವಾ 10 ವರ್ಷಗಳ ಹಿಂದಿನ ಸಮೀಕ್ಷೆ ಎಂಬ ಕಾರಣ ನೀಡಿ ಇಂದೀಕರಣ ಮಾಡಲು ಸಮಿತಿ ರಚನೆ ಮಾಡುತ್ತದೆಯೇ ಎಮಬ ಕುತೂಹಲ ಮೂಡಿದೆ.