Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಯಮ ಇನ್ನು ಕಠಿಣ : ಅಭ್ಯರ್ಥಿಗಳಿಗೆ ನಾಮಪತ್ರದೊಂದಿಗೆ ಪ್ರಮಾಣಪತ್ರವೂ ಕಡ್ಡಾಯ.!
KARNATAKA

BIG NEWS : ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಯಮ ಇನ್ನು ಕಠಿಣ : ಅಭ್ಯರ್ಥಿಗಳಿಗೆ ನಾಮಪತ್ರದೊಂದಿಗೆ ಪ್ರಮಾಣಪತ್ರವೂ ಕಡ್ಡಾಯ.!

By kannadanewsnow57

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸಬೇಕಾದ ಪ್ರಮಾಣಪತ್ರದ (Affidavit) ನಮೂನೆಯಲ್ಲಿ ಕೆಲವು ಪ್ರಮುಖ ಅಂಶಗಳನ್ನು ಸೇರ್ಪಡೆಗೊಳಿಸಿ ಆಯೋಗವು ಈ ಹೊಸ ತಿದ್ದುಪಡಿ ಆದೇಶವನ್ನು ನೀಡಿದೆ.

ಚುನಾವಣಾ ಆಯೋಗದ ಆದೇಶ ಸಂಖ್ಯೆ: SECK/ULB/OTHR/1/2026-ULB ರನ್ವಯ, ನಾಮಪತ್ರದ ಪ್ರಮಾಣಪತ್ರದ ಭಾಗ-ಎ ಮತ್ತು ಭಾಗ-ಬಿ ನಲ್ಲಿ ಹೊಸ ಅಂಶಗಳನ್ನು ಅಳವಡಿಸಲಾಗಿದೆ.

ಅನರ್ಹತೆಯ ಬಗ್ಗೆ ಸ್ಪಷ್ಟನೆ: ಯಾವುದೇ ಶಾಸನಬದ್ಧ ಪ್ರಾಧಿಕಾರ ಅಥವಾ ಸ್ಥಳೀಯ ಪ್ರಾಧಿಕಾರವು ಅಭ್ಯರ್ಥಿಯನ್ನು ಈ ಹಿಂದೆ ಅನರ್ಹಗೊಳಿಸಿದ್ದರೆ, ಆ ಬಗ್ಗೆ ಸಂಪೂರ್ಣ ವಿವರಗಳನ್ನು (ಪ್ರಕರಣದ ಸಂಖ್ಯೆ, ದಿನಾಂಕ ಮತ್ತು ಅನರ್ಹತೆಯ ಅವಧಿ) ಕಡ್ಡಾಯವಾಗಿ ನೀಡಬೇಕೆಂದು ಸೂಚಿಸಲಾಗಿದೆ.

ವಿಸ್ತೃತ ಮಾಹಿತಿ ಸಲ್ಲಿಕೆ: ಅಭ್ಯರ್ಥಿಯು ತನ್ನ ಮತ್ತು ತನ್ನ ಅವಲಂಬಿತರ ಆಸ್ತಿ ವಿವರ, ಕ್ರಿಮಿನಲ್ ಹಿನ್ನೆಲೆ (ಇದ್ದಲ್ಲಿ), ಶೈಕ್ಷಣಿಕ ಅರ್ಹತೆ ಹಾಗೂ ಸರ್ಕಾರಕ್ಕೆ ಸಲ್ಲಿಸಬೇಕಾದ ಬಾಕಿ ಹಣದ ವಿವರಗಳನ್ನು ಈ ನವೀಕೃತ ನಮೂನೆಯಲ್ಲಿ ಭರ್ತಿ ಮಾಡಬೇಕಾಗುತ್ತದೆ.

ಯಾರಿಗೆ ಅನ್ವಯಿಸುತ್ತದೆ?

ಈ ಹೊಸ ನಿಯಮವು ಗ್ರೆಟರ್ ಬೆಂಗಳೂರು ಪ್ರಾಧಿಕಾರ (BBMP) ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಅನ್ವಯವಾಗಲಿದೆ.

ವಿಶೇಷ ಸೂಚನೆ:

ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಬಿಳಿ ಹಾಳೆಯ ಮೇಲೆ ಸಿದ್ಧಪಡಿಸಿ ಚುನಾವಣಾ ಅಧಿಕಾರಿಗೆ ಸಲ್ಲಿಸಬಹುದು, ಇದಕ್ಕೆ ಯಾವುದೇ ಶುಲ್ಕವಿರುವುದಿಲ್ಲ. ಆದರೆ ನಗರ ಪ್ರದೇಶದ ಅಭ್ಯರ್ಥಿಗಳು ನಿಗದಿಪಡಿಸಿದ ಮುದ್ರಿತ ದಸ್ತಾವೇಜು ಹಾಳೆಯಲ್ಲಿಯೇ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.

ಗಮನಿಸಿ: ಸುಳ್ಳು ಮಾಹಿತಿ ನೀಡುವುದು ಅಥವಾ ಮಾಹಿತಿಯನ್ನು ಮರೆಮಾಚುವುದು ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವಾಗಬಹುದು ಎಂದು ಆಯೋಗವು ಎಚ್ಚರಿಸಿದೆ.

BIG NEWS: The rules for local body elections in the state are now stricter: A certificate is also mandatory along with the nomination paper!
Share. Facebook Twitter LinkedIn WhatsApp Email

Related Posts

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

2 Mins Read
Recent News

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

State News
KARNATAKA

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಲಬುರ್ಗಿ: ಮನೆಯವರು ತಮ್ಮ ಪ್ರೀತಿಯನ್ನು ಒಪ್ಪುವುದಿಲ್ಲ ಹಾಗೂ ಮದುವೆಗೆ ವಿರೋಧ ಮಾಡುತ್ತಾರೆ ಎಂಬ ಆತಂಕಕ್ಕೆ ಹೆದರಿದ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು…

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

ಕೆಂಪೇಗೌಡ ಜಯಂತಿಯಂದು ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಸಿಎಂ ಡಿ.ಕೆ.ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.