ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ (CMC & TMC) ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ಖಾತಾ ಕಡ್ಡಾಯವಾಗಿದ್ದು, ಸೆಪ್ಟೆಂಬರ್ 9 ರಿಂದ ನೋಂದಣಿ ಪ್ರಾರಂಭವಾಗಲಿದೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೊಂದಣಿಗೆ ಸಂಬAಧಿಸಿದAತೆ ಇದೇ ಸೆ.9 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಆದ್ದರಿಂದ ಸಾರ್ವಜನಿಕರು ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೊಂದಣಿಗಾಗಿ ಇ-ಆಸ್ತಿ ಸಲ್ಲಿಸುವುದು ಕಡ್ಡಾಯವಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಇ-ಆಸ್ತಿ ತಂತ್ರಾಂಶದ ಮಾಹಿತಿ ಹೊರತು,ಬೇರೆ ಯಾವುದೇ ವಿಧಾನದಲ್ಲಿ ಸ್ಥಿರಾಸ್ತಿಗಳ ನೋಂದಣಿ ಮಾಡಿದ್ದಲ್ಲಿ ಕಾನೂನಿನಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಸೆಪ್ಟೆಂಬರ್ 2024 ರಿಂದ ಬಾಗಲಕೋಟೆ, ರಾಯಚೂರು, ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚಾಲನೆ ನೀಡಲಾಗುತ್ತಿದೆ. ಇ-ಆಸ್ತಿ ಖಾತಾ ಇಲ್ಲದ ಸ್ವತ್ತುಗಳ ನೋಂದಣಿ ಸಾಧ್ಯವಿಲ್ಲ.