ಬೆಂಗಳೂರು : ರಾಜ್ಯದಲ್ಲಿ ಸುಮಾರು 20 ತಾಲೂಕುಗಳಲ್ಲಿರುವ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಸುಮಾರು 100 ಕೋಟಿ ವೆಚ್ಚದಲ್ಲಿ 200 ಪಶು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದೂ, 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಇದೀಗ ರಾಜ್ಯ ಸರ್ಕಾರ ತೀರ್ಮಾನಿಸಿದೆ.
10 ಕೋಟಿ ರೂಪಾಯಿ ವೆಚ್ಚದಲ್ಲಿ ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಬಾಡಿಗೆ ಹಾಗೂ ಶಿಥಿಲಾವಸ್ಥೆಯಲ್ಲಿರುವ ಪಶು ಆಸ್ಪತ್ರೆಗಳನ್ನು ಮರು ನಿರ್ಮಾಣ ಮಾಡಲು ಮೇಲ್ದರ್ಜೆಗೆ ಏರಿಸಲಾಗಿದೆ. ಸುಮಾರು 100 ಕೋಟಿ ವೆಚ್ಚದಲ್ಲಿ 200 ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ.