ಬೆಳಗಾವಿ : ರಾಜ್ಯದಲ್ಲಿ ವಿನಾಶದ ಅಂಚಿನಲ್ಲಿರುವ ದೇಶಿಯ ಕುರಿ ತಳಿಗಳನ್ನು ಸಂರಕ್ಷಿಸಲು ತಳಿ ಸಂವರ್ಧನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜೊತೆಗೆ ರೈತರಿಗೆ ಕುರಿ/ಮೇಕೆ ಮರಿಗಳನ್ನು ತಳಿ ಉನ್ನತಿಗಾಗಿ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ ಎಂದು ಪಶು ಸಂಗೋಪನಾ ಸಚಿವರಾದ ಕೆ. ವೆಂಕಟೇಶ್ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಯತಿಂದ್ರ ಎಸ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪಶು ಸಂಗೋಪನಾ ಸಚಿವರಾದ ಕೆ. ವೆಂಕಟೇಶ್ ಅವರ ಉತ್ತರ, 2019ನೇ ಜಾನುವಾರು ಗಣತಿ ಪ್ರಕಾರ ಕರ್ನಾಟಕ ರಾಜ್ಯದಲ್ಲಿ 110.51 ಲಕ್ಷ ಕುರಿಗಳು ಮತ್ತು 61.69 ಲಕ್ಷ ಮೇಕೆಗಳಿರುತ್ತವೆ. ಕರ್ನಾಟಕದಲ್ಲಿ ಮಂಡ್ಯ, ಹಾಸನ, ಕೆಂಗುರಿ, ಬಳ್ಳಾರಿ, ಡೆಕನಿ, ಯಳಗ ಕುರಿ ತಳಿಗಳು ಮತ್ತು ನಂದಿ ದುರ್ಗ, ಬಿದರಿ ಮೇಕೆ ತಳಿಗಳು ರಾಜ್ಯದಲ್ಲಿವೆ.