ಮೈಸೂರು : ರಾಜ್ಯಕ್ಕೆ ಜಿಎಸ್‌ಟಿ ಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸಣ್ಣ ರೈತರು, ಬಡ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳು ಕಡಿಮೆಯಾಗಲಿದೆ. ಈ ಮೂಲಕ ಜನರ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ.
ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯ ಸರ್ಕಾರದ ಮೇಲೆ ಸುಮಾರು 3,000 ಕೋಟಿ ರೂ.ಗಳ ಹೊರೆ ಬೀಳಲಿದೆ ಎಂದರು.
ರಾಜ್ಯಕ್ಕೆ ಜಿಎಸ್‌ಟಿ ಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ… pic.twitter.com/AnsgsavDeV
— Siddaramaiah (@siddaramaiah) January 5, 2026








