ನವದೆಹಲಿ : ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಪುತ್ರ ವಿಜಯ್ ನಿರಾಣಿ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ಹೌದು 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ್ದರು. ಆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ 2023ರಲ್ಲಿ ಬ್ರೇಕ್ ಹಾಕಿತ್ತು. ಆದರೆ, ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರಿಂಕೋರ್ಟ್, ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ ತನಿಖೆಗೆ ಆದೇಶಿಸಿದೆ.
ಪ್ರಕರಣ ಹಿನ್ನೆಲೆ?
ವಿಜಯ್ ನಿರಾಣಿ ನಿರಾಣಿ ಶುಗರ್ಸ್ ಲಿಮಿಟೆಡ್ ಕಂಪನಿಯ ನಿರ್ದೇಶಕರಾಗಿದ್ದಾರೆ. ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್‌ನ ಡಿಸ್ಟಿಲರಿ ಫ್ಯಾಕ್ಟರಿಯಲ್ಲಿ ತ್ಯಾಜ್ಯ ನಿರ್ವಹಣಾ ಘಟಕವೊಂದನ್ನು ಸ್ಥಾಪಿಸಿದ್ದರು. ಆ ಘಟಕಕ್ಕೆ ಅನುಮತಿ ಪಡೆದಿರಲಿಲ್ಲ. ಘಟಕದಲ್ಲಿ 2018ರ ಡಿ. 16ರಂದು ಬಾಯ್ಲರ್ ಸ್ಫೋಟಗೊಂಡಿತ್ತು. ದುರ್ಘಟನೆಯಲ್ಲಿ ಆರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು.
ಪ್ರಾಥಮಿಕ ತನಿಖೆ ನಡೆಸಿದ್ದ ಪೊಲೀಸರು ವಿಜಯ್ ನಿರಾಣಿಯವರ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ರಾಜ್ಯ ಸರ್ಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿತ್ತು. ಇದೇ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆ ನಡೆಸದಂತೆ ಕರ್ನಾಟಕ ಹೈಕೋರ್ಟ್ ಎರಡು ವರ್ಷಗಳ ಹಿಂದೆ ಆದೇಶಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ತಳ್ಳಿ ಹಾಕಿದೆ. ನ್ಯಾ. ಸಂಜಯ್ ಕರೋಲ್ ಹಾಗೂ ಸಂದೀಪ್ ಮೆಹ್ತಾ ಅವರ ಪೀಠದಿಂದ ಆದೇಶ ಹೊರಬಂದಿದೆ.