ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಆಗಿದೆ. ನಗರದ ಅವಲಹಳ್ಳಿ ಖಾಸಗಿ ಕಾಲೇಜಿನಲ್ಲಿ ಈ ಒಂದು ಗಲಾಟೆ ನಡೆದಿದೆ. ಕಾರಣ ಏನು ಅಂದರೆ ಓಣಂ ವಿಚಾರವಾಗಿ ಕೇರಳ ವಿದ್ಯಾರ್ಥಿಗಳ ನಡುವೆ ಈ ಒಂದು ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.
ಹೌದು ಓಣಂ ವಿಚಾರವಾಗಿ ಪರಸ್ಪರ ವಿದ್ಯಾರ್ಥಿಗಳ ಗುಂಪು ಹೊಡೆದಾಡಿಕೊಂಡಿದೆ. ಕಾಲೇಜಿನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳು ಗಲಾಟೆ ನಡೆಸಿದ್ದಾರೆ. ಓಣಂ ವಿಚಾರವಾಗಿ ಕೇರಳ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ ಕಾಲೇಜಿನಲ್ಲಿ ಸೀನಿಯರ್ಸ್ ಮತ್ತು ಜೂನಿಯರ್ಸ್ ನಡುವೆ ಗಲಾಟೆ ನಡೆದಿದೆ. ಪೊಲೀಸರು ವಿದ್ಯಾರ್ಥಿಗಳ ಗಲಾಟೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.