ಕಲಬುರ್ಗಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅವಾಚ್ಯ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲ್ಬುರ್ಗಿಯಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು, ಸಿಟಿ ರವಿ ಅವರು ಅವಾಚ್ಯ ಪದ ಬಳಸಿದ್ದ ಆಡಿಯೋ ಹಾಗೂ ವಿಡಿಯೋ ರೆಕಾರ್ಡ್ ಇದೆ ಎಂದು ತಿಳಿಸಿದರು.
ಇಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಪದ ಬಳಸಿದ್ದ ಸಾಕ್ಷಿಯೇ ಇದೆ. ಆಡಿಯೋ ವಿಡಿಯೋ ಕೂಡ ರೆಕಾರ್ಡ್ ಆಗಿದೆ. ಸಿಟಿ ರವಿ ಪದ ಬಳಕೆ ಅತ್ಯಂತ ಖಂಡನೀಯವಾಗಿದೆ ಎಂದು ಕಲ್ಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ಈ ಕುರಿತು ಹೇಳಿಕೆ ನೀಡಿದರು.
ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಸಿಟಿ ರವಿ ಹೇಳುತ್ತಾರೆ. ಆದರೆ ಅಂದು ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲವಾಗಿ ಪದ ಬಳಸಿ ನಿಂದಿಸಿದ್ದನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಎರಡು ಸದಸ್ಯರು ಕೂಡ ಕೇಳಿಸಿಕೊಂಡಿದ್ದಾರೆ. ಈ ಕುರಿತು ಸಾಕ್ಷಿ ಕೂಡ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.