ಹುಬ್ಬಳ್ಳಿ : ಪ್ರಸ್ತುತ ರಾಜ್ಯದಲ್ಲಿ ಯಾವುದೇ ರೀತಿಯಾಗಿ ಆರ್ಥಿಕ ಸಂಕಷ್ಟ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಲೇ ಬಂದಿದೆ. ಗ್ಯಾರೆಂಟಿ ಯೋಜನೆಗಳು ಕುರಿತು ಸುಳ್ಳು ಅಪಪ್ರಚಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದೆ. ಆದರೆ ಬೇರೇ ರಾಜ್ಯಗಳಲ್ಲಿ ಬಿಜೆಪಿಯವರು ಗ್ಯಾರಂಟಿ ಘೋಷಿಸುತ್ತಾರೆ. ರಾಜ್ಯದಲ್ಲಿ ಆರ್ಥಿಕವಾಗಿ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇದು ಇಬ್ಬಗೆ ನೀತಿ ಅಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಬಿಜೆಪಿಗೆ ಸ್ಪಷ್ಟ ನಿಲುವು ಇಲ್ಲ ಬರಿ ಸುಳ್ಳು ಅಪಪ್ರಚಾರ ಮಾಡುತ್ತಾರೆ. ಸರ್ಕಾರದಲ್ಲಿ ದುಡ್ಡು ಇಲ್ಲ ಅಂತ ಸುಳ್ಳು ಹೇಳುತ್ತಿದ್ದಾರೆ. ಯಾವ ಕೆಲಸ ದುಡ್ಡಿಲ್ಲದೆ ನಿಂತಿದೆ ಸಾಬೀತು ಮಾಡಲಿ. ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.ಅಧಿವೇಶನ ಎರಡು ವಾರ ನಡೆಯಬೇಕು ಅಂತ ನಮ್ಮ ಉದ್ದೇಶ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಆದರೆ ವಿಪಕ್ಷ ಹೇಗೆ ಸಹಕಾರ ನೀಡುತ್ತದೆ ಅಂತ ನೋಡೋಣ ಎಂದರು.