ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಆಗಿರಬಹುದು ಅಥವಾ ಸರ್ಕಾರದ ಸಾಧನೆಗಳ ಕುರಿತಂತೆ ಈಗಾಗಲೇ ಸಾಧನ ಸಮಾವೇಶ ನಡೆಸುತ್ತಿದೆ. ಇದೀಗ ಈ ಒಂದು ಗ್ಯಾರಂಟಿ ಯೋಜನೆಗಳಿಗೆ ನಮ್ಮಲ್ಲಿ ಯಾವುದೇ ಹಣದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹಣಕಾಸಿನ ಕೊರತೆ ಇಲ್ಲ. ಅಲ್ಲದೆ, ಕಳೆದ ಬಾರಿಯ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52 ಸಾವಿರದ 9 ಕೋಟಿ ರೂ. ಅನುದಾನ ಮೀಸಲಿಡಲಾಗಿತ್ತು. ಈ ವರ್ಷ 50 ಸಾವಿರದ 18 ಕೋಟಿ ರೂ. ಮೀಸಲಿಡಲಾಗಿದೆ. ಹೀಗಾಗಿ ಹಣಕಾಸಿನ ತೊಂದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಹಂತ ಹಂತವಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಅದರಲ್ಲಿ ಮಹಿಳೆಯರಿಗೆ ಎಂದೆ ಗೃಹಲಕ್ಷ್ಮಿ ಯೋಜನೆ ಬಹಳ ಉಪಯುಕ್ತವಾಗಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆ ಹಣದಿಂದ ಅದೆಷ್ಟೋ ಮಹಿಳೆಯರು ಸಮಾಜಕ್ಕೆ ಮಾದರಿಯಾಗಿರುವ ಉದಾಹರಣೆ ನೋಡಿದ್ದೇವೆ.
ಆದರೆ ಕಳೆದ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ ಜಮೆ ಆಗಿಲ್ಲ ಎನ್ನುವುದು ರಾಜ್ಯದ ಯಜಮಾನೀಯರ ಆರೋಪವಾಗಿದೆ ಈಗಾಗಲೇ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮೇ ತಿಂಗಳಲ್ಲಿ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಹಂತ ಹಂತವಾಗಿ ಯಜಮಾನ ಹಾಕಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ ಹಾಗಾಗಿ ಮೇ ಅಂತ್ಯದವರೆಗೂ ರಾಜ್ಯದ ಲಕ್ಷ್ಮಿ ಯೋಜನೆ ಫಲಾನುಭವಿಗಳು ಹಣ ಜಮೆ ಆಗೋವರೆಗೆ ಕಾಯಲೆ ಬೇಕು.