ಚಿಕ್ಕಮಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆ, ರೈತರಿಗೆ ನೆಮ್ಮದಿ ಸಿಕ್ಕಿದ್ದು, ರಾಜ್ಯದಲ್ಲಿ ಈ ಬಾರಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಎಷ್ಟು ವಿದ್ಯುತ್ ಬೇಕೋ ಅಷ್ಟೂ ವಿದ್ಯುತ್ ನಮ್ಮಲ್ಲಿ ಇದೆ. ಹೀಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಪ್ರತಿ ದಿನ 18 ರಿಂದ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಹಿಂದೆಂದೂ ಈ ಪ್ರಮಾಣದಲ್ಲಿ ವಿದ್ಯುತ್ ಬೇಡಿಕೆ ಬಂದಿರಲಿಲ್ಲ. ಆದರೆ ವಿದ್ಯುತ್ ಉತ್ಪಾದನೆ ಹೆಚ್ಚಾಗಿರುವುದರಿಂದ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.