ಚಿಕ್ಕಮಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಭಾರಿ ಸದ್ದು ಮಾಡುತ್ತಿದ್ದು, ಒಂದು ಕಡೆಗೆ, ಎಸ್ಸಿ, ಎಸ್ ಟಿ ಸಮುದಾಯದ ಅನ್ಯಾಯ ಆಗುತ್ತಿರುವ ಕುರಿತು ಹಲವು ಕಾಂಗ್ರೆಸ್ ನಾಯಕರು ಸಭೆ ನಡೆಸುತ್ತಿದ್ದರೆ, ಇನ್ನೊಂದು ಕಡೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ದೇವರ ಮೊರೆ ಹೋಗಿದ್ದಾರೆ. ಇದೀಗ ರಾಜಕೀಯದಲ್ಲಿ ಯಾವುದೇ ತಿರುವಿಲ್ಲ ಐದು ವರ್ಷಗಳ ಕಾಲ ನಮ್ಮದೇ ಸರ್ಕಾರ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿಯ ಮೆಣಸೆ ಹೆಲಿಪ್ಯಾಡ್ ಬಳಿ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ರಾಜಕೀಯದಲ್ಲಿ ಯಾವುದೇ ತಿರುವಿಲ್ಲ. ಜನರು ಅಧಿಕಾರ ನೀಡಿದ್ದಾರೆ. ಐದು ವರ್ಷ ನಮ್ಮ ಸರ್ಕಾರನೇ ಇರುತ್ತದೆ.ನಮ್ಮ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತದೆ. ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಹೈಕಮಾಂಡ್ ಹೇಳಿದಂತೆ ನಾವೆಲ್ಲರೂ ಕೆಲಸ ಮಾಡುತ್ತೇವೆ ನನಗೆ ಯಾರ ಬೆಂಬಲ ಬೇಡ ಯಾರ ಘೋಷಣೆಯು ಬೇಡ. ಪಕ್ಷಕ್ಕಾಗಿ ನಾನು ಕೆಲಸ ಮಾಡುತ್ತೇನೆ. ಪ್ರತಿಫಲ ನೀಡುವುದು ದೇವರಿಗೆ ಬಿಟ್ಟಿರುವ ವಿಷಯ ಎಂದು ಶೃಂಗೇರಿ ಬಳಿಯ ಮೆಣಸೆ ಹೆಲಿಪ್ಯಾಡ್ ಬಳಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಿಂದ ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ಶೃಂಗೇರಿ ಮೆಣಸೇ ಹೆಲಿಪ್ಯಾಡ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಆಗಮಿಸಿದರು. ಶೃಂಗೇರಿ ಶಾರದಾ ಮಠಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ತೆರಳಲಿದ್ದಾರೆ. ಶಾರದಾಂಬೆಯ ದರ್ಶನ ಪಡೆದು ಬಳಿಕ ಶ್ರೀಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಸಿರಿಗೇರಿ ಶಾರದಾ ಮಠದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಒಂದು ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.