ಬೆಂಗಳೂರು : ಒಂದು ಕಡೆ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದ್ದರೆ, ಮತ್ತೊಂದು ಕಡೆ ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು ಬಿ ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಅವರು, ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯಾಧ್ಯಕ್ಷರ ಆಯ್ಕೆ ಬಾಕಿ ಉಳಿದ ರಾಜ್ಯಗಳ ಬಗ್ಗೆ ಬಿಜೆಪಿ ಗಮನ ಹರಿಸಲಿದೆ ಎಂಬ ವರದಿಗಳ ಬೆನ್ನಲ್ಲೇ, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ.ಆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುತ್ತೇನೆ. ಪಕ್ಷ ಸಂಘಟನೆಯ ಉದ್ದೇಶದಿಂದ ಎಲ್ಲರನ್ನೂ ಭೇಟಿಯಾಗುತ್ತಿದ್ದೇನೆ. ಏನೇ ಸಮಸ್ಯೆ, ಕಷ್ಟ ಬಂದರೂ ಸಹಿಸಿಕೊಂಡು ಪಕ್ಷ ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಕಾರ್ಯಕರ್ತರ ಮಧ್ಯೆ ದುಡಿಯುತ್ತಿದ್ದೇನೆ. ಸಣ್ಣ, ಪುಟ್ಟ ಸಮಸ್ಯೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಕೆಲಸವನ್ನು ನಾನು ಮಾಡಿಕೊಂಡು ಹೋಗುತ್ತೇನೆ ಎಂದರು.








