ಬಾಗಲಕೋಟೆ : ನಿನ್ನೆ ತಾನೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನ್ನ ಹಾಗೂ ಡಿಕೆ ಶಿವಕುಮಾರ್ ಮಧ್ಯ ಏನು ಇಲ್ಲ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ಐದು ವರ್ಷಗಳ ಕಾಲ ನಮ್ಮ ಸರ್ಕಾರ ಬಂಡೆಯ ರೀತಿ ಭದ್ರವಾಗಿರುತ್ತದೆ ಎಂದು ಒಗ್ಗಟ್ಟು ಪ್ರದರ್ಶಿಸಿದ್ದರು. ಇದೀಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಡಿಸೆಂಬರ್ 31 ರೊಳಗಾಗಿ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 31ರ ಒಳಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ.ಕಾಂಗ್ರೆಸ್ ಪಕ್ಷದಲ್ಲಿ 70-80 ಶಾಸಕರು ಅಸಮಾಧಾನಗೊಂಡಿದ್ದಾರೆ. ಸರ್ಕಾರ ಬಂದು ಎರಡು ವರ್ಷಗಳಾದರು ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಜನ ಛೀಮಾರಿ ಹಾಕುತ್ತಿದ್ದಾರೆ ಎಂದು ಶಾಸಕರು ಅಳಲು ತೋಡಿಕೊಳ್ಳುತ್ತಿದ್ದಾರೆ. ಹೈಕಮಾಂಡ್ ನಾಯಕರ ಮುಂದೆ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ 52 ಶಾಸಕರು ಪತ್ರವನ್ನು ಸಹ ಬರೆದುಕೊಟ್ಟಿದ್ದಾರೆ. ಬಡವರಿಗೆ ಮನೆ ಕೂಡಲು ಹಣ ಕೇಳುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.ಈ ವಿಚಾರವನ್ನು ಖರ್ಗೆ ಸುರ್ಜೆವಾಲ ಮುಂದೆ ಹೇಳಿಕೊಂಡಿದ್ದಾರೆ. ಅದಕ್ಕೆ ತೇಪೇ ಹಚ್ಚಲು ರಾಜ್ಯಕ್ಕೆ ಸುರ್ಜೆವಾಲಾ ಬಂದಿದ್ದಾರೆ. ತೇಪೆ ಹಚ್ಚುವುದು ಅಂದರೆ ಹಳೆಯ ಬಟ್ಟೆಗಳಿಗೆ ಹೊಲಿಗೆ ಹಾಕಿದಂತೆ. ಆ ಹುಲಿಗೆ ಬಹಳ ದಿನ ಉಳಿಯಲ್ಲ ಹೊಲಿಗೆ ಬಿಚ್ಚಿ ಹೋಗುತ್ತದೆ. ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತ ಹಲವರು ಅಸಮಾಧಾನಗೊಂಡಿದ್ದಾರೆ.
ಈ ಸರ್ಕಾರದಲ್ಲಿ ನಾಲ್ಕು ಗುಂಪುಗಳಾಗಿ ಕಚ್ಚಾಡುತ್ತಿದ್ದಾರೆ. ಅಲ್ಪಸಂಖ್ಯಾತ, ದಲಿತ, ಒಕ್ಕಲಿಗ ಲಿಂಗಾಯತ ಅಂತ ಕಚ್ಚಾಟ ನಡೆಯುತ್ತಿದೆ. ಖಂಡಿತವಾಗಿಯೂ ಡಿಸೆಂಬರ್ 31ರ ಒಳಗೆ ಈ ಸರ್ಕಾರ ಇರುವುದಿಲ್ಲ ಎಂದು ಗೋವಿಂದ ಕಾರಜೋಳ್ ತಿಳಿಸಿದರು. ಇದರ ಲಾಭವನ್ನು ಬಿಜೆಪಿ ಪಡೆದುಕೊಳ್ಳುತ್ತಾ ಎಂಬ ವಿಚಾರವಾಗಿ ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡು ಕುಳಿತುಕೊಳ್ಳಲು ಆಗುತ್ತಾ? ಎಲ್ಲವನ್ನು ಡಿಸೆಂಬರ್ 31ರ ಬಳಿಕ ವಿವರವಾಗಿ ಹೇಳುತ್ತೇನೆ ಎಂದು ಹೇಳಿಕೆ ನೀಡಿದರು.