Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೀಗಿವೆ `ಮಹರ್ಷಿ ವಾಲ್ಮೀಕಿ ಜಯಂತಿ’ ಕಾರ್ಯಕ್ರಮದಲ್ಲಿ `CM ಸಿದ್ದರಾಮಯ್ಯ’ ಭಾಷಣದ ಮುಖ್ಯಾಂಶಗಳು!
INDIA

BIG NEWS : ಹೀಗಿವೆ `ಮಹರ್ಷಿ ವಾಲ್ಮೀಕಿ ಜಯಂತಿ’ ಕಾರ್ಯಕ್ರಮದಲ್ಲಿ `CM ಸಿದ್ದರಾಮಯ್ಯ’ ಭಾಷಣದ ಮುಖ್ಯಾಂಶಗಳು!

By kannadanewsnow5717/10/2024 1:37 PM

ಬೆಂಗಳೂರು : ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿಯವರು ವಾಲ್ಮೀಕಿ ಸಮುದಾಯದವರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿಯವರು ರಾಮಾಯಣ ಬರೆಯಲು ಸಾಧ್ಯವಾ? ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು, ಶ್ಲೋಕಗಳ ಮೂಲಕ ಜಗತ್ಪ್ರಸಿದ್ಧ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಎಂದರು.

ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು, ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ. ರಾಮನ‌ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದೊಂದು ಸಣ್ಣ ಉದಾಹರಣೆ.

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾಯ್ದೆಯನ್ನು ಜಾರಿಗೆ ತಂದಿಲ್ಲ.

ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು.
ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ.

ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ.

ನಾವು ಜಾರಿಗೊಳಿಸಿದ ಬಡ್ತಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ‌ ಜನತೆ ಅರ್ಥಮಾಡಿಕೊಳ್ಳಬೇಕು.

ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು, ನೀವು ಸಲ್ಲಿಸುವ ಗೌರವ ಎಂದು ಹೇಳಿದ್ದಾರೆ.

BIG NEWS : These are the highlights of ``CM Siddaramaiah'' speech in ``Maharshi Valmiki Jayanti'' program! BIG NEWS : ಹೀಗಿವೆ `ಮಹರ್ಷಿ ವಾಲ್ಮೀಕಿ ಜಯಂತಿ' ಕಾರ್ಯಕ್ರಮದಲ್ಲಿ `CM ಸಿದ್ದರಾಮಯ್ಯ' ಭಾಷಣದ ಮುಖ್ಯಾಂಶಗಳು!
Share. Facebook Twitter LinkedIn WhatsApp Email

Related Posts

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM1 Min Read

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM1 Min Read

BREAKING : ಮತ್ತೆ ಚಿನ್ನ ಗೆದ್ದ ‘ಸುಮಿತ್ ಆಂಟಿಲ್’! ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್’ನಲ್ಲಿ ಭಾರತ ಪ್ರಾಬಲ್ಯ

12/03/2026 9:40 PM1 Min Read
Recent News

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM

BREAKING : ಮತ್ತೆ ಚಿನ್ನ ಗೆದ್ದ ‘ಸುಮಿತ್ ಆಂಟಿಲ್’! ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್’ನಲ್ಲಿ ಭಾರತ ಪ್ರಾಬಲ್ಯ

12/03/2026 9:40 PM
State News
KARNATAKA

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

By kannadanewsnow0912/03/2026 9:44 PM KARNATAKA 2 Mins Read

ಶಿವಮೊಗ್ಗ:  ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಒಳ್ಳೆಯ ಕೆಲಸ ಡಂಗೂರ ಸಾರಿಕೊಂಡು ಹೋಗಲು ಬರುವುದಿಲ್ಲ. ಇಂತಹ ಮಾದರಿ…

vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.