ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಲಿದೆ. ಹಾಗಾಗಿ ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ನನ್ನ ಮೇಲೆ ರಾಜಕೀಯ ಕೇಸ್ ಹಾಕಿರುವುದು ಇದೇ ಮೊದಲು ಎಂದು ತಿಳಿಸಿದರು.
ಮೈಸೂರಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲೆ ರಾಜಕೀಯ ಕೇಸ್ ಹಾಕಿದ್ದು ಇದೇ ಮೊದಲು. ತಪ್ಪು ಮಾಡಿದ್ದರೆ ತಾನೇ ರಾಜೀನಾಮೆ ಕೊಡುವುದು. ತಪ್ಪು ಮಾಡಿಲ್ಲ ಅಂದರೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿ ಯಾರ ಸರ್ಕಾರದಲ್ಲಿ ಇರುವುದು? ಅವರ ಮೇಲೆ ಎಫ್ ಐ ಆರ್ ಆಗಿದ್ದರೂ ಕೂಡ ಜಾಮೀನಿನ ಮೇಲೆ ಹೊರಗಡೆ ಇದ್ದಾರಲ್ಲ ಅವರ್ಯಾಕೆ ರಾಜೀನಾಮೆ ಕೊಟ್ಟಿಲ್ಲ? ಎಂದರು.
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಈ ರೀತಿ ರಾಜಕೀಯ ಮಾಡುತ್ತಿದ್ದಾರೆ. ಗೋದ್ರಾ ಗಲಭೆ ನಡೆದಾಗ ನರೇಂದ್ರ ಮೋದಿ ರಾಜೀನಾಮೆ ಕೊಟ್ಟಿದ್ದಾರ? ಬಿಜೆಪಿಯವರಿಗೆ ರಾಜೀನಾಮೆ ಕೇಳುವ ಯಾವ ನೈತಿಕತೆ ಇದೆ? ನನ್ನ ಮೇಲೆ ರಾಜಕೀಯ ಕೇಸ್ ಹಾಕಿರುವುದು ಇದೇ ಮೊದಲು ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಇಡೀ ದೇಶದಲ್ಲಿ ಎಲ್ಲೆಲ್ಲಿ ವಿರೋಧ ಪಕ್ಷಗಳು ಆಡಳಿತ ಇದೆಯೋ ಅಲ್ಲಿ ಎಲ್ಲಾ ಸಿಬಿಐ, ಇಡಿ ಬಳಸಿ ದಾಳಿ ನಡೆಸುವುದು. ಇದರಿಂದ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಯತ್ನಿಸಿದರು. ಆದರೆ ಆಗಲಿಲ್ಲ ಏಕೆಂದರೆ 136 ಜನ ನಾವಿದ್ದೇವೆ ಎಂದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.