ಚಿಕ್ಕಮಗಳೂರು : ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಇಡೀ ದೇಶಾದ್ಯಂತ ಅಂದು ಹಲವು ರಾಜ್ಯಗಳು ರಜೆ ಘೋಷಿಸಿವೆ. ಅಲ್ಲದೆ ಕರ್ನಾಟಕ ರಾಜ್ಯದಲ್ಲೂ ಕೂಡ ರಜೆ ಘೋಷಿಸಬೇಕೆಂದು ಕೂಗು ಕೇಳಿ ಬರುತ್ತಿದೆ.
ಆದರೆ ಅದರ ವಿರುದ್ಧವಾಗಿ ಒಂದು ವಿಚಾರ ಬೆಳಕಿಗೆ ಬಂದಿದ್ದು,ಇದೀಗ ರಾಮಮಂದಿರ ಕಾರ್ಯಕ್ರಮದ ದಿನ ಶಾಲೆಗೆ ರಜೆ ಹಾಕಿದರೆ ದಂಡ ಹಾಕಲಾಗುತ್ತದೆ ಎಂದು ಚಿಕ್ಕಮಗಳೂರು ನಗರದ ಸೈಂಟ್ ಜೋಸೆಫ್ ಶಾಲೆಯಲ್ಲಿ ಈ ಕುರಿತಂತೆ ಎಚ್ಚರಿಕೆ ನೀಡಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.ರಾಮಮಂದಿರ ಕಾರ್ಯಕ್ರಮದ ದಿನ ಶಾಲೆಗೆ ರಜೆ ಹಾಕಿದರೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗುತ್ತದೆ ಎಂದು ಶಾಲಾ ಮಂಡಳಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.
ಇಡೀ ದೇಶಕ್ಕೆ ದೇಶವೇ ರಾಮ ಮಂದಿರ ಉದ್ಘಾಟನೆಗಾಗಿ ಅತ್ಯಂತ ಕುತೂಹಲದಿಂದ ಕಾಯುತ್ತಿದ್ದು ಈಗಾಗಲೇ ಕೆಲವು ರಾಜ್ಯಗಳಲ್ಲಿ ಅಲ್ಲಿನ ಸರಕಾರ ರಜೆ ಘೋಷಣೆ ಮಾಡಲಾಗಿದ್ದು ಕೇಂದ್ರ ಸರ್ಕಾರ ಕೂಡ ಅರ್ಧ ದಿನ ರಜೆ ಘೋಷಿಸಿದೆ ಆದರೆ ಚಿಕ್ಕಮಗಳೂರಿನ ಶ್ರೀ ಶಾಲೆಯಲ್ಲಿ ರಜೆ ಹಾಕಿದರೆ ದಂಡ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿರುವುದು ಯಾವುದು ದೇಶಕ್ಕೆ ಎಂದು ಕಾರಣ ತಿಳಿದು ಬಂದಿಲ್ಲ.