ಚಿತ್ರದುರ್ಗ : ಕಳೆದ ಮೇ 3ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ರೋಚಕ ಗೆಲುವು ಸಾಧಿಸಿತು. ಇನ್ನು ಆರ್‌ಸಿಬಿ ಸಿಎಸ್‌ಕೆ ವಿರುದ್ಧ ಗೆಲ್ಲುತ್ತಿದ್ದಂತೆ ಚಿತ್ರದುರ್ಗದಲ್ಲಿ ಆರ್‌ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿ ಕಟ್ ಔಟ್ ಮುಂದೆ ಮೇಕೆ ಬಲಿ ಕೊಟ್ಟಿದ್ದಾರೆ. ಮೇಕೆಯನ್ನು ಬಲಿ ಕೊಟ್ಟ ಮೂವರು ಆರ್ಸಿಬಿ ಅಭಿಮಾನಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ
ಹೌದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಿಯಮ್ಮನಹಳ್ಳಿ ಈ ಘಟನೆ ನಡೆದಿತ್ತು. ಮೇಕೆ ಬಲಿ ನೀಡಿದ ಆರೋಪದ ಮೇರೆಗೆ ಆರ್‌ಸಿಬಿಯ ಮೂವರು ಅಭಿಮಾನಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಣ್ಣ ಪಾಲಯ್ಯ (22), ಜಯಣ್ಣ (23) ಮತ್ತು ತಿಪ್ಪೆಸ್ವಾಮಿ (28) ಎಂದು ಗುರುತಿಸಲಾಗಿದೆ.’call-me-143-kalki’ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿರುವ ಈ ವಿಡಿಯೋ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.
ಚೆನ್ನೈ ವಿರುದ್ಧ ಆರ್‌ಸಿಬಿ ರೋಚಕ ಗೆಲುವು ಸಾಧಿಸಿದ ಬಳಿಕ ಅಭಿಮಾನಿಗಳ ಸಂಭ್ರಮಾಚರಣೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಇದನ್ನ ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ವೈರಲ್ ಆಗಿರೋ 20 ಸೆಕೆಂಡುಗಳ ವಿಡಿಯೋದಲ್ಲಿ ಒಬ್ಬ ಯುವಕ ಕೊಹ್ಲಿಯ ಕಟೌಟ್‌ನ ಮುಂದೆ ಮೇಕೆಯನ್ನ ಹಿಡಿದಿರುತ್ತಾನೆ.
ಮತ್ತೋರ್ವ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಜಯ ಸಾಧಿಸಿದೆ ಎಂದು ಕೂಗುತ್ತಿದ್ದಂತೆ, ಮೇಕೆಯನ್ನು ಮಚ್ಚಿನಿಂದ ಕಡಿದು, ಅದರ ರಕ್ತವನ್ನು ಕೊಹ್ಲಿಯ ಕಟೌಟ್ ಮತ್ತು ಪೋಸ್ಟರ್‌ಗೆ ಅರ್ಪಣೆ ಮಾಡಲಾಗುತ್ತದೆ. ಮೂರನೇ ವ್ಯಕ್ತಿ ಮೇಕೆಯನ್ನು ಹಗ್ಗದಿಂದ ಹಿಡಿದಿಟ್ಟುಕೊಂಡಿರುವುದನ್ನು ಕಾಣಬಹುದು. ಈ ವಿಡಿಯೋ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಮೊಳಕಾಲ್ಮೂರು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ಮೂವರು ಆರ್‌ಸಿಬಿ ಅಭಿಮಾನಿಗಳನ್ನ ಬಂಧಿಸಿದ್ದಾರೆ.