ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಮಳೆಯ ಅವಾಂತರ ಮುಂದುವರೆದಿದೆ. 2 ಪ್ರತ್ಯೇಕ ಘಟನೆಗಳಲ್ಲಿ ಸಿಡಿಲಿಗೆ ಮೂವರು ಬಲಿ ಆಗಿದ್ದಾರೆ.ಕೊಪ್ಪಳದ ಚುಕ್ಕನಕಲ್‌ನಲ್ಲಿ ಸಿಡಿಲು ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಒಬ್ಬರು ಬಲಿ ಆಗಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೇ ಇಂದು ಬೆಂಗಳೂರಿನ ಮಲ್ಲೇಶ್ವರಂ, ಮೆಜೆಸ್ಟಿಕ್, ಟೌನ್ ಹಾಲ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಮಳೆಯಾಗಿದೆ. ಹವಮಾನ ಇಲಾಖೆ ಏ.17ರವರೆಗೆ ಮಳೆಯ ಮುನ್ಸೂಚನೆ ನೀಡಿದ್ದು, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.