ಬೆಂಗಳೂರು : ಬೆಂಗಳೂರಿನ ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ಅವರ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯ ಪೊಲೀಸರು ಮುಂಬೈನಲ್ಲಿ ನೇಪಾಳಿ ಗ್ಯಾಂಗಿನ ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ಅವರ ಮನೆಯಲ್ಲಿ ಕೆಲಸಕ್ಕೆ ಇದ್ದಂತಹ ನೇಪಾಳ ಮೂಲದ ಗಣೇಶ್ ಹಾಗೂ ಗೀತಾ ಎನ್ನುವವರು ನಾಗೇಶ್ ಅವರ ಮನೆಯಲ್ಲಿದ್ದ ಕೋಟ್ಯಾಂತರ ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದು, ಇನ್ನು ದಂಪತಿ ಗಣೇಶ್ ಹಾಗೂ ಗೀತಾಳಿಗೆ ಶೋಧಕಾರ್ಯ ಮುಂದುವರೆದಿದೆ.
ಈ ಕುರಿತು ಥೀಯೇಟರ್ ಮಾಲೀಕ ನಾಗೇಶ್ ಅವರು ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಮುಂಬೈನಲ್ಲಿ ನೇಪಾಳಿ ಗ್ಯಾಂಗ್ನ ಮೂವರನ್ನು ಬಂಧಿಸಿದ್ದಾರೆ.ಸಿಸಿಟಿವಿ ಹಾಗೂ ಮೊಬೈಲ್ ನೆಟ್ವರ್ಕ್ ಆಧರಿಸಿ ಕಾರ್ಯಾಚರಣೆ ಮಾಡಿ ಅರೆಸ್ಟ್ ಮಾಡಿದ್ದಾರೆ. ಪ್ರಕಾಶ್ ಶಾಹಿ ಅಪಿಲ್ ಶಾಹಿ ಹಾಗೂ ಜಗದೀಶ್ ಶಾಹಿ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.