ಮಂಡ್ಯ : ಹೊರ ರಾಜ್ಯಗಳಿಂದ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ವಾಹನಗಳನ್ನು ಗುರಿಯಾಗಿಸಿಕೊಂಡು ಅವರಿಂದ ಹಣವನ್ನು ವಸೂಲಿ ಮಾಡುತ್ತಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಕುರಿತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹೌದು ಕೆಆರ್‌ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಸೇರಿದಂತೆ ಒಟ್ಟು ಮೂವರು ಪೊಲೀಸರು ಸೇರಿಕೊಂಡು ಹೊರ ರಾಜ್ಯದಿಂದ ಮಂಡ್ಯದ ಕೆಆರ್‌ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ವಾಹನಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಈ ಬಗ್ಗೆ ವಿಡಿಯೋ ಸಾಕ್ಷಿ ಸಮೇತ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯ ಪೇದೆ ಸೇರಿ ಮೂವರು ಪೊಲೀಸ್ ಪೇದೆಗಳ ಸಸ್ಪೆಂಡ್ ಮಾಡಲಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಪುರುಷೋತ್ತಮ್, ಕಾನ್ಸ್ ಸ್ಟೇಬಲ್ ಅನಿಲ್ ಕುಮಾರ್ ಹಾಗೂ ಪ್ರಭು ಸ್ವಾಮಿ ಎಂಬುವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ. ಈ ಮೂಲಕ ಹೊರ ರಾಜ್ಯದ ವಾಹನ ಸವಾರರಿಂದ ಹಣ ವಸೂಲಿಗೆ ಇಳಿದಿದ್ದಂತ ಮೂವರು ಪೊಲೀಸ್ ಸಿಬ್ಬಂದಿಗಳಿಗೆ ಶಾಕ್ ನೀಡಿದ್ದಾರೆ.