ಬೆಂಗಳೂರು : ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ ಕಾಳಸಂತೆಯಲ್ಲಿ ಅಧಿಕ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪದಡಿ ಇದೀಗ ಬೆಂಗಳೂರಲ್ಲಿ ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದ ವಂಶಿ (23) ಎಂದು ತಿಳಿದುಬಂದಿದೆ. ಆರೋಪಿ ವಂಶಿಗೆ ಒಳ್ಳೆಯ ಸಂಬಳವಿತ್ತು. ಆದರೆ, ಕಾಳಸಂತೆಯಲ್ಲಿ ಐಪಿಎಲ್ ಪಂದ್ಯಗಳ ಟಿಕೆಟ್ ಖರೀದಿಸುತ್ತಿದ್ದ ಆರೋಪಿ, ಅದನ್ನ ದುಪ್ಪಟ್ಟು ಬೆಲೆಗಿಂತಲೂ ಅಧಿಕ ಬೆಲೆಗೆ ಬ್ಲ್ಯಾಕ್‌ನಲ್ಲಿಯೇ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.
ಮೇ 17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) V/s ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಪಂದ್ಯದ ಟಿಕೆಟ್‌ಗಳನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಳಿ ಖರೀದಿದಾರರ ಸೋಗಿನಲ್ಲಿ ತೆರಳಿದ್ದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.