ಕಲಬುರ್ಗಿ : ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಕೆಲ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ, ಇನ್ನು ಕೆಲವರು ಡಿಕೆ ಶಿವಕುಮಾರ್ ಸಿಎಂ ಅಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ ಇದರ ಮಧ್ಯ ಬಿಜೆಪಿಯ ಮಾಜಿ ಸಚಿವ ಗೋವಿಂದ ಕಾರಜೋಳ ರಾಜ್ಯದಲ್ಲಿ ದಲಿತ ಸಿಎಂ ಆಗುವ ಸಮಯ ಬಂದಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಕಲ್ಬುರ್ಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತ ಸಿಎಂ ಆಗುವ ಸಮಯ ಬಂದಿದೆ. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು. ಸಿದ್ದರಾಮಯ್ಯ ದಲಿತರು ಸಿಎಂ ಆಗಲು ಸಹಕಾರ ನೀಡಬೇಕು. ಮಲ್ಲಿಕಾರ್ಜುನ ಖರ್ಗೆ ಮನಸ್ಸು ಮಾಡಿದರೆ ರಾಜ್ಯದಲ್ಲಿ ದಲಿತರು ಸಿಎಂ ಆಗಬಹುದು ಎಂದು ಕಲ್ಬುರ್ಗಿಯಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.