ಬೆಂಗಳೂರು : ಬೆಂಗಳೂರಿನಲ್ಲಿ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಕಪ್ ಗೆದ್ದ ಹಿನ್ನೆಲೆಯಲ್ಲಿ ಸಮಾರಂಭ ಆಯೋಜನೆ ಮಾಡಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಹೌದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪತ್ರ ಬರೆದಿದ್ದಾರೆ. ಈಗಾಗಲೇ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು ಈ ಒಂದು ಪ್ರಕರಣ ಸದ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.