ಮೈಸೂರು : ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ತಾನೇ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್, ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಂಡಿತು. ಅದಾದ ಬಳಿಕ ಬಿಜೆಪಿ ಸಹ ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡು ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ನಡೆಸಿತ್ತು. ಇದೀಗ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರನ್ನು ಬೆಂಬಲಿಸಿ, ಮೈಸೂರು ಜಿಲ್ಲೆಯ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಹರೀಶ್ ಗೌಡ ಅವರು ಇಂದು ಮೈಸೂರುನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಇಂದು ಕಾಂಗ್ರೆಸ್ ಶಾಸಕ ಕೆ ಹರೀಶ್ ಗೌಡ ನೇತೃತ್ವದಲ್ಲಿ ಧರ್ಮಸ್ಥಳ ಯಾತ್ರೆ ಆರಂಭವಾಗಲಿದೆ.ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಕೆ ಹರೀಶ್ ಗೌಡ ಬೆಳ್ಗೆ 8 ಗಂಟೆಗೆ ಮೈಸೂರಿನಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಗೌಡ ಪ್ರಯಾಣ ಬೆಳೆಸಲಿದ್ದಾರೆ. ಅವರ ಜೊತೆಗೆ ಮೈಸೂರಿನಿಂದ ಧರ್ಮಸ್ಥಳಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಸಹ ತೆರಳಲಿದ್ದಾರೆ.
ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇಗುಲದಿಂದ ಕಾರ್ಯಕರ್ತರು ತೆರಳಲಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಬಸ್ ಹಾಗೂ 2000ಕ್ಕೂ ಹೆಚ್ಚು ಜನ ಕಾರುಗಳಲ್ಲಿ ಪ್ರಯಾಣ ಬೆಳೆಸಲಿದ್ದಾರೆ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬೆಂಬಲಿಸಿ ಈ ಒಂದು ಯಾತ್ರೆ ಹಮ್ಮಿಕೊಂಡಿದ್ದಾರೆ.