ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಿದೆ.
ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು,ವಿಚಾರಣೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ಪರವಾಗಿ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಸರ್ಕಾರದ ಪರ ಕಪಿಲ್ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ವಾದಿಸಲಿದ್ದಾರೆ. ಹಿಂದಿನ ಭೂಮಾಲೀಕ ದೇವರಾಜು ಪರ ದುಷ್ಯಂತ್ ದವೆ ವಾದಿಸಲಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ. ರಾಘವನ್ ವಾದ ಮಂಡಿಸಲಿದ್ದಾರೆ.
ಡಿಸೆಂಬರ್ 19 ರಂದು ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯಪೀಠ 2025 ಜನವರಿ 15 ಕ್ಕೆ ವಿಚಾರಣೆ ಮುಂದೂಡಿತ್ತು. ಆಕ್ಷೇಪಣೆ ಸಲ್ಲಿಸಲು ಪ್ರತಿ ವಾದಿಗಳಿಗೆ ಸೂಚನೆ ನೀಡಿತು. ಅಲ್ಲದೆ ಜನವರಿ 15 ಇಂದು ಅಂತಿಮ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧರಿಸಿದೆ ಎನ್ನಲಾಗಿದೆ.