ಬೆಂಗಳೂರು : ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಬದಲಾವಣೆ ನಡೆಯುತ್ತಿದ್ದು ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದೆ. ಇದರ ಮಧ್ಯ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಲು ಸಮಯ ನಿಗದಿಪಡಿಸಲಾಗಿದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಎರಡು ಬಾರಿ ದೆಹಲಿಗೆ ತೆರಳಿ ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬಂದಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು ಈ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆಯಲ್ಲಿ ರಾತ್ರಿ 8 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಸಮಯ ನಿಗದಿಪಡಿಸಲಾಗಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತಂತೆ ಈ ಹಿಂದೆ ದೆಹಲಿಗೆ ಭೇಟಿ ನೀಡಿದಾಗ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದು ರಾಹುಲ್ ಗಾಂಧಿ ಅವರಿಗೆ ವರದಿ ನೀಡೋಣ ಅಂತ ಹೇಳಿದ್ದರು. ಇದೀಗ ಇಂದು ಮತ್ತೊಮ್ಮೆ ಭೇಟಿ ಮಾಡುತ್ತಿರುವುದರಿಂದ ಸಹಜವಾಗಿ ಉಭಯ ನಾಯಕರ ಬೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.








