ಯಾದಗಿರಿ : ರಾಜ್ಯದಲ್ಲಿ RSS ಪಥ ಸಂಚಲನ ಕುರಿತಂತೆ ಈಗಾಗಲೇ ಹಲವು ಘಟನೆಗಳು ನಡೆದಿದ್ದು, ಇದೀಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮಭೂಮಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ನಲ್ಲಿ ನಾಳೆ RSS ಪಥ ಸಂಚಲನ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಷರತ್ತು ಬದ್ಧ ಜಾಮೀನು ನೀಡಿದ್ದಾರೆ. RSS ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಡಳಿತ ಅನುಮತಿ ನೀಡಿದೆ.
ಹೌದು ಗುರುಮಠಕಲ್ ಪಟ್ಟಣದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಂದ ಗುರುಮಠಕಲ್ ಪಟ್ಟಣದ ನರೇಂದ್ರ ರಾಠೋಡ್ ಲೇಔಟ್ನಿಂದ ಪಥಸಂಚಲನ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಸಾಮ್ರಾಟ್ ವೃತ್ತ, ಬಸವೇಶ್ವರ ವೃತ್ತ, ಹನುಮಾನ್ ದೇವಸ್ಥಾನ ಹಾಗೂ ಕುಂಬಾರವಾಡಿ ಸೇರಿ ಹಲವೆಡೆ ಪಥಸಂಚಲನ ಸಂಚರಿಸಲಿದೆ.
ಷರತ್ತುಗಳೇನು?
ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು, ನಿಗದಿತ ಮಾರ್ಗವಷ್ಟೇ ಪಥಸಂಚಲನಕ್ಕೆ ಬಳಸುವುದು, ಜಾತಿ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಘೋಷಣೆ ಕೂಗದಿರುವುದು ಹಾಗೂ ಮಾರಕಾಸ್ತ್ರ ಹಿಡಿದುಕೊಂಡು ಹೋಗುವುದನ್ನು ನಿಷೇಧಿಸಿ ಅನುಮತಿ ನೀಡಲಾಗಿದೆ.








