ಬೆಂಗಳೂರು : ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 15 ರ ನಾಳೆ ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು.
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ.
ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.
ಸಬ್ಸಿಡಿ ಯೋಜನೆಗಳು
1) ಡಿ, ದೇವರಾಜ ಅರಸು ಸ್ವಯಂ ಉದ್ಯೋಗ ನೇರಸಾಲ/ಕಾಯಕಕಿರಣ/ಪಂಚವ್ಯಕ್ತಿ ಯೋಜನೆ.
2) ಗಂಗಾ ಕಲ್ಯಾಣ/ಜೀವಜಲ/ಜಲಭಾಗ್ಯ ಯೋಜನೆ.
3) ಸ್ವಾವಲಂಭಿ ಸಾರಥಿ ಯೋಜನೆ.
4) ಅರಿವು ಶೈಕ್ಷಣಿಕ ಸಾಲ/ಬಸವಬೆಳಗು ಯೋಜನೆ(ಹೊಸತು ಮತ್ತು ನವೀಕರಣ)
5) ವಿದೇಶಿ ವಿಶ್ವ ವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ.
6) ಬ್ಯಾಂಕ್ ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಯೋಜನೆ.
7) ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ.
8) ಭೋಜನಾಲಯ ಕೇಂದ್ರ ಯೋಜನೆ
9) ವಿಭೂತಿ ನಿರ್ಮಾಣ ಘಟಕ.
10) ಉಚಿತ ಹೊಲಿಗೆ ಯಂತ್ರ ಯೋಜನೆ