ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್‌ಜೈಂಟ್ಸ್ ತಂಡಗಳ ನಡುವೆ ನಾಳೆ ಐಪಿಎಲ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡುಗಳನ್ನ ಮಾಡಲಾಗಿದೆ.
ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳು:
ಕ್ವೀನ್ಸ್ ರಸ್ತೆಯಲ್ಲಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ವೃತ್ತದಿಂದ ಸಿಟಿಓ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ . ಇನ್ನು ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ರಸ್ತೆಯಿಂದ ಅನಿಲ್ ಕುಂಬ್ಳೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ. ಅದೇ ರೀತಿ ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ.
ಕಬ್ಬನ್ ರಸ್ತೆಯಲ್ಲಿ ಸಿಟಿಒ ವೃತ್ತದಿಂದ ಡಿಕೆನ್ಸ್‌ನ್ ರಸ್ತೆ ಎರಡು ಬದಿಯಲ್ಲಿ, ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಸೈಂಟ್ ಮಾರ್ಕ್ಸ್ ರಸ್ತೆಯಲ್ಲಿ ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಸೈಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ.
ಕಸ್ತೂರಬಾ ರಸ್ತೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆ: ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಸಿದ್ದಲಿಂಗಯ್ಯ ವೃತ್ತದಿಂದ ಆರ್‌ಆರ್‌ಎಂಆರ್ ವೃತ್ತದವರೆಗೆ. ಕಬ್ಬನ್ ಪಾರ್ಕ್ ಒಳಭಾಗ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಫೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.
ವಾಹನ ನಿಲುಗಡೆಗೆ ಅವಕಾಶವಿರುವ ಸ್ಥಳಗಳು:
ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಸಿದ್ದಲಿಂಗಯ್ಯ ವೃತ್ತ.
ಸೈಂಟ್ ಜೋಸೆಫ್ ಯುರೋಪಿಯನ್ ಸ್ಕೂಲ್ ಮೈದಾನ, ಮ್ಯೂಸಿಯಂ ರಸ್ತೆ.
ಫ್ರೀಡಂ ಪಾರ್ಕ್ ಎಂ.ಎಲ್.ಸಿ.ಪಿ ಪಾರ್ಕಿಂಗ್ ಸ್ಥಳ.
ಗರುಡಾ ಮಾಲ್ ಪಾರ್ಕಿಂಗ್ ಸ್ಥಳ.
ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ.
ಯು.ಬಿ. ಸಿಟಿ ನಿಲುಗಡೆ ಸ್ಥಳ.
ಕಂಠೀರವ ಕ್ರೀಡಾಂಗಣ.








