ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಪಕ್ಕದ ಆಂಧ್ರಪ್ರದೇಶದ ಗಡಿ ಭಾಗವಾದ ಕೊಸಗಿ ಮಂಡಲ ವ್ಯಾಪ್ತಿಯ ಕಂದಕೂರ ಗ್ರಾಮದಲ್ಲಿರುವ ರಾಜಲಾಬಂಡ ಅಣೆಕಟ್ಟಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ತುಂಗಾಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಈಜಾಡಲು ಹೋದ 20 ಜನರ ಪೈಕಿ 4 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತದುರ್ದೈವಿಗಳು ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದವರಾಗಿದ್ದು, ಗ್ರಾಮದ ಉಮಾವತಿ ಗೋವಿಂದ (35) ರತ್ನ ಮಹಾಂತೇಶ್ (28) ಮಹಾಂತೇಶ್ ಪೀತಾಂಬರ್ (24) ಸುಂಕೇಶ್ವರ ಗ್ರಾಮದ ಶಿವಾನಂದ ಹನುಮಂತರಾಯ (24) ಮೃತಪಟ್ಟಿದ್ದಾರೆ. ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಕೊಸಗಿಗೆ ಹೋಗಿದ್ದರು.
ನದಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಕೆರೆಗಳನ್ನ ತುಂಬಲು ತುಂಗಭದ್ರ ನದಿಗೆ ಹೆಚ್ಚಿನ ನೀರು ಹರಿಯುತ್ತಿದೆ. ಈಜಾಡಲು ಇಳಿದಿದ್ದ ಇಪ್ಪತ್ತು ಜನರಲ್ಲಿ ನಾಲ್ವರು ಒಂದೇ ಕುಟುಂಬದವರು ಈ ದುರ್ಘಟನೆಯಲ್ಲಿ ಸಾವನಪ್ಪಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಕೊಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








