ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ಒಂದು ನಡೆದಿದ್ದು ಈಜಲು ಹೋಗಿದ್ದ ಬಾಲಕರು ಇಬ್ಬರು ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಬಳಿ ಈ ಒಂದು ದುರಂತ ಸಂಭವಿಸಿದೆ.
ಮೃತ ಬಾಲಕರನ್ನು ಬಸವರಾಜ ಸೋಮಣ್ಣವರ್ (10) ಹಾಗೂ ಹನುಮಂತ (10) ಎಂದು ತಿಳಿದುಬಂದಿದೆ ನೀರಿನ ರಭಸ ಹೆಚ್ಚಾಗಿ ಕಾಲುವೆಯಲ್ಲಿ ಬಾಲಕರು ಕೊಚ್ಚಿ ಹೋಗಿದ್ದಾರೆ. ಸದ್ಯ ಇಬ್ಬರು ಬಾಲಕರ ಶವಗಳನ್ನು ಸ್ಥಳೀಯರು ಹಾಗೂ ಪೊಲೀಸರು ಹೊರಗಡೆ ತೆಗೆದಿದ್ದಾರೆ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








