ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಸ್ತಕ್ಷೇಪದ ಬಗ್ಗೆ ಹೈಕೋರ್ಟ್ ಅಸಮಾಧಾನ ಹೊರಹಾಕಿತ್ತು. ಇದೀಗ ಅದರ ಬೆನ್ನಲ್ಲೇ ಹೈಕೋರ್ಟ್ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಅಥವಾ ಸ್ಥಳ ನಿಯುಕ್ತಿ ವಿಚಾರಗಳು ಇಲಾಖಾ ಹಂತದಲ್ಲೇ ಮುಗಿಯಬೇಕು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಬೆಸ್ಕಾಂ ಸಹಾಯಕ ಎಂಜಿನಿಯರ್ ಒಬ್ಬರ ಮೇಲ್ಮನವಿ ವಿಚಾರಣೆ ವೇಳೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಸ್ವಾಮ್ಯದ ಉದ್ಯಮಗಳ ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿ ವಿಚಾರಗಳು ಸಂಬಂಧಪಟ್ಟ ಆಡಳಿತ ಇಲಾಖೆಯ ಹಂತದಲ್ಲೇ ಮುಗಿಯಬೇಕು ಎಂದು ಸ್ಪಷ್ಟಪಡಿಸಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ವೈಟ್ಫೀಲ್ಡ್ ವಿಭಾಗದ ಸಹಾಯಕ ಎಂಜಿನಿಯರ್ ಎಸ್.ಚೇತನ್ ಎಂಬಾತ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಅಭಿಪ್ರಾಯ ನೀಡಿತು.ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಉದ್ಯಮದಲ್ಲಿ ಕೆಲಸ ಮಾಡುವ ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ಸಂಬಂಧಪಟ್ಟ ಆಡಳಿತ ಇಲಾಖೆ ನಿರ್ವಹಿಸಬೇಕು ಎಂದು ತಿಳಿಸಿದೆ.








