ಬೆಂಗಳೂರು : 2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲಿನ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಆಗಸ್ಟ್-2025 ನೇ ಮಾಹೆಯ ಮೊದಲ ವಾರದಲ್ಲಿ http://rdprtransfer.kamataka.gov.in ನಲ್ಲಿ ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸೇವಾ ವಿವರಗಳನ್ನು ಪರಿಶೀಲಿಸಿ ತಮ್ಮ ಹಂತದಲ್ಲಿ ಅನುಮೋದನೆ ನೀಡಲಾಗಿರುತ್ತದೆ. ಪ್ರಸ್ತುತ ಸದರಿ ಅನುಮೋದನೆ ನೀಡಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸೇವಾ ವಿವರಗಳಲ್ಲಿ ಯಾವುದೇ ಪ್ರಕಾರದ ಮಾಹಿತಿ ತಿದ್ದುಪಡಿ ಮಾಡಬೇಕಾಗಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ದಿನಾಂಕ:04.08.2025ರೊಳಗೆ ಈ ಕಛೇರಿಗೆ ಸಲ್ಲಿಸಲು ತಿಳಿಸಿದೆ. ಮುಂದುವರೆದು ಈ ಪತ್ರದೊಂದಿಗೆ ಲಗತ್ತಿಸಿರುವ ನಮೂನೆ 1 ರಿಂದ 4 ರ ವರೆಗಿನ ನಮೂನೆಗಳಲ್ಲಿ ಮಾಹಿತಿಯನ್ನು ಕಡ್ಡಾಯವಾಗಿ ದಿನಾಂಕ: 04.08.2025ರ ಒಳಗೆ ಸಲ್ಲಿಸಲು ತಿಳಿಸಿದೆ. ದಿನಾಂಕ: 04.08.2025ರ ನಂತರ ಸಲ್ಲಿಸುವ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ.