ಮೈಸೂರು : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರೀತಿ ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಯತ್ನಿಸಲಾಗುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ.
ಸಭೆಯೊಂದರಲ್ಲಿ ಮಾತನಾಡಿದ ಅವರು, ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ವಿರೋಧಿಗಳನ್ನು ಮುಗಿಸಲು ಸಂಚು ರೋಪಿಸಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೂ ಜೈಲಿಗೆ ಕಳುಹಿಸಲು ಯತ್ನಿಸಲಾಗುತ್ತಿದೆ ಎಂದರು.
ಮೈಸೂರು-ಕೊಡಗು ಕ್ಷೇತ್ರದ ಮತದಾರರು ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ನನ್ನನ್ನು ಸೋಲಿಸಿ ಸಿದ್ದರಮಯ್ಯಗೆ ಅವಮಾನ ಮಾಡಬೇಡಿ ಎಂದು ಹೇಳಿದ್ದಾರೆ.