ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ನಿಂತಿದ್ದ ಸ್ಕೂಟರ್ ಗಳು ಹಾಗೂ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಹಾಗೂ ಓರ್ವ ದ್ವಿಚಕ್ರ ವಾಹನ ಸವಾರನಿಗೆ ಗಂಭೀರವಾದ ಗಾಯಗಳಾಗಿವೆ.
ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿ ತಡರಾತ್ರಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂ ಗೊಂಡಿದೆ. ಅಪಘಾತದಲ್ಲಿ ಇಬ್ಬರು ಗಾಯಾಳುಗಳಿಗೆ ವೈದೇಹಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.