ರಾಮನಗರ : ದಕ್ಷಿಣ ಕರ್ನಾಟಕ ಭಾಗದಲ್ಲಿ ಜನರ ಮೇಲೆ ಕಾಡಾನೇ ದಾಳಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅರಣ್ಯ ಅಧಿಕಾರಿಗಳು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಸಹ ಈ ರೀತಿಯ ಅನಾಹುತಗಳು ಸಂಭವಿಸುತ್ತಲೇ ಇವೆ. ಕಾಡಾನೆ ನಿಯಂತ್ರಿಸುವಲ್ಲಿ ಅರಣ್ಯ ಅಧಿಕಾರಿಗಳು ವಿಫಲರಾಗುತ್ತಿರುವುದು ಪದೇಪದೇ ಕಂಡು ಬಂದಿದೆ.
ಜಿಲ್ಲೆಯ ಕನಕಪುರ ತಾಲೂಕಿನ ಗೇರಹಳ್ಳಿ ಗ್ರಾಮದಲ್ಲಿ ಕಾಡಾನೆಗಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು ಕಾಡಾನೆ ದಾಳಿಗೆ ಪುಟ್ನಂಜ (65) ಎನ್ನುವ ವೃದ್ಧರೊಬ್ಬರೂ ಬಲಿಯಾಗಿದ್ದಾರೆ. ರಾಗಿ ಕಣದಲ್ಲಿ ಅವರು ಮಲಗಿಕೊಂಡಾಗ ಆನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಲ್ಲದೆ ಕೊಡಗು ಜಿಲ್ಲೆಯ ರಾಜ ಪೇಟೆ ತಾಲೂಕಿನ ಅಮ್ನತ್ತಿ ಹೊಸೂರಿನಲ್ಲಿ ಕಾಡನೆ ದಾಳಿಗೆ ಮಹಿಳೆ ಬಳಿಯಾಗಿದ್ದು ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಅಮ್ಮನತ್ತಿ ಹೊಸೂರು ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆ ಬೇಬಿ (40) ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಂಗಡಿಯಿಂದ ಮನೆಗೆ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.