ಬೆಂಗಳೂರು : ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚಿನಲ್ಲಿ ವಿಜಯನಗರ ಜಿಲ್ಲೆಯ ಮೂಲದ ಮಹಿಳೆಯೋರ್ವಳನ್ನು, ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಸ್ಥಳೀಯರು ಆಕೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ ಇನ್ನು ಈ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಪ್ರಕರಣ ಕುರಿತು ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು.ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ.
ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ. ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ
ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು.ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು.
ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ…
— Siddaramaiah (@siddaramaiah) March 19, 2025