Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕದ `ಪಂಚ ಗ್ಯಾರಂಟಿ ಯೋಜನೆ’ಗಳಿಗೆ ವಿಶ್ವಸಂಸ್ಥೆ ಮೆಚ್ಚುಗೆ.!
KARNATAKA

BIG NEWS : ಕರ್ನಾಟಕದ `ಪಂಚ ಗ್ಯಾರಂಟಿ ಯೋಜನೆ’ಗಳಿಗೆ ವಿಶ್ವಸಂಸ್ಥೆ ಮೆಚ್ಚುಗೆ.!

By kannadanewsnow57

ಬಳ್ಳಾರಿ : ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ.

ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು.

ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ (SDG) ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು, ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ, ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ, ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿಗಳು ನೀಡಿದರು.

ಮಹಿಳೆಯರು ಸ್ವಸಹಾಯ ಗುಂಪುಗಳನ್ನು (SHG) ಸಂಘಟಿಸಲು, ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆಗೆ ಪ್ರೋತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿಯನ್ನು ವಿಶ್ವಸಂಸ್ಥೆಯ ಅಧ್ಯಕ್ಷರು ಶ್ಲಾಘಿಸಿದರು.ಮುಂಬರುವ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶೋಗಾಥೆಗಳನ್ನು ಹಂಚಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು, ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು ಎಂದು ಅಭಿಪ್ರಾಯ ಪಟ್ಟರು.

ನವೀಕರಿಸಬಹುದಾದ ಇಂಧನ ಉತ್ಪಾದನೆ ರಾಜ್ಯಕ್ಕೆ ಅಗ್ರಸ್ಥಾನ

ಒಟ್ಟು ಇಂಧನ ಉತ್ಪಾದನೆಯಲ್ಲಿ ಶೇ. 40 ರಷ್ಟು ಪಾಲು ನವೀಕರಿಸಬಹುದಾದ ಮೂಲಗಳಿಂದ ಬರುತ್ತಿರುವುದರಿಂದ ಕರ್ನಾಟಕವು ಶುದ್ಧ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿರುವುದಕ್ಕೆ ವಿಶ್ವಸಂಸ್ಥೆಯ ಅಧ್ಯಕ್ಷರು ಸಂತೋಷ ವ್ಯಕ್ತಪಡಿಸಿದರು.

ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ಧಿ, ಕೃತಕ ಬುದ್ಧಿ ಮತ್ತೆ (AI), ಸಂಶೋಧನೆ ಮತ್ತು ನಾವೀನ್ಯತೆಗಾಗಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕವು ಸಾಧಿಸಿರುವ ಪ್ರಗತಿಯನ್ನು ವಿಶ್ವಸಂಸ್ಥೆಯ ಮೆಚ್ಚಿದರು. ಇತರ ದೇಶಗಳಿಗೆ ಡಿಜಿಟಲ್ ರೂಪಾಂತರವನ್ನು ಉತ್ತೇಜಿಸುವ ಸಲುವಾಗಿ ಸಹಾಯದ ಅಗತ್ಯವಿದ್ದು, ರಾಜ್ಯದ ಬೆಂಬಲವನ್ನು ಕೋರಿದರು.ರಾಜ್ಯ, ಜಿಲ್ಲೆ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿ ಸೂಚಕಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಕರ್ನಾಟಕ ರಚಿಸಿದ ಸುಸ್ಥಿರ ಅಭಿವೃದ್ದಿ ಗುರಿಗಳ (SDG) ಡ್ಯಾಶ್ಬೋರ್ಡ್ ವೀಕ್ಷಿಸಿ ಶ್ಲಾಘಿಸಿದರು.ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ ಮತ್ತಿತರರು ಇದ್ದರು.

BIG NEWS: UN lauds Karnataka's 'Five Guarantee Schemes'
Share. Facebook Twitter LinkedIn WhatsApp Email

Related Posts

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

2 Mins Read

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

2 Mins Read

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

2 Mins Read
Recent News

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

State News
KARNATAKA

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು…

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.