ಬೆಂಗಳೂರು : ಸಾಮಾನ್ಯವಾಗಿ ನಾವೇ ಸಿನೆಮಾದಲ್ಲಿ ನೋಡಿರುವಂತೆ ಈ ಕೊಲೆ ದರೋಡೆ ಪ್ರಕರಣಗಳಲ್ಲಿ ಜೈಲು ಸೇರಿರುವ ಅಪರಾಧಿಗಳು ಆರೋಗ್ಯ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಬಳಿಕ ಪೊಲೀಸರ ಕಣ್ತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿರುವ ದೃಶ್ಯಗಳನ್ನು ಸಿನಿಮಾ ಗಳಲ್ಲಿ ನೋಡಿರುತ್ತೇವೆ.ಆದರೆ ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂತಹದ್ದೇ ಘಟನೆ ನಡೆದಿದೆ.
ಹೌದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ನಿಂದ ಚಂದ್ರಶೇಖರ್ ಎನ್ನುವ ಕೈದಿ ಪರಾರಿಯಾಗಿದ್ದಾನೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ವೈದಾಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ.
ಈ ಕುರಿತು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಮುಂಜಾನೆ 5:30 ರ ಸುಮಾರಿಗೆ ವಿಚಾರಣಾಧೀನ ಕೈದಿ ಚಂದ್ರಶೇಖರ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಪರಪ್ಪನ ಅಗ್ರಹಾರನಿಂದ ವಿಚಾರಣಾ ಪೊಲೀಸರು ಆಸ್ಪತ್ರೆಗೆ ಕರೆತಂದಿದ್ದರು. ಎದೆ ನೋವು ಎಂದು ವಿಚಾರಣಾಧೀನ ಕೈದಿ ಚಂದ್ರಶೇಖರ್ ಆಸ್ಪತ್ರೆಗೆ ದಾಖಲಾಗಿದ್ದ.
ಮೇ 2 ರಂದು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ಗೆ ಚಂದ್ರಶೇಖರ್ ದಾಖಲಾಗಿದ್ದ. ದರೋಡೆ ಪ್ರಕರಣದಲ್ಲಿ ಚಂದ್ರಶೇಖರ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದ. ಇಂದು ಮುಂಜಾನೆ ಪೊಲೀಸರ ಕಣ್ಣು ತಪ್ಪಿಸಿ ಚಂದ್ರಶೇಖರ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ ಸ್ಥಳಕ್ಕೆ ವಿವಿ ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.