ಮಂಗಳೂರು : ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಒಬ್ಬ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧಿನ ಕೈದಿಯನ್ನು ಪ್ರಕಾಶ್ ಮೂಲ್ಯ (48) ಎಂದು ತಿಳಿದುಬದಿದೆ.
ಜೈಲಿನ ಶೌಚಾಲಯದಲ್ಲಿ ನೇಣಿಗೆ ಶರಣಾಗಿರುವ ಪ್ರಕಾಶ್ ಮೂಲ್ಯ ಮದ್ಯದ ವ್ಯಸನಿಯಾಗಿದ್ದ. ಪ್ರಕಾಶ್ ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್ ನಲ್ಲಿ ಜೈಲು ಸೇರಿದ್ದ. 12 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಪ್ರಕಾಶ್ ಅತ್ಯಾಚಾರ ಎಸಗಿದ್ದ. ಮೂಡಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಬೀಗ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.