Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಾದ್ಯಂತ ಶೀಘ್ರವೇ `ಏಕರೀತಿಯ ತೆರಿಗೆ ವ್ಯವಸ್ಥೆ’ ಜಾರಿ : ಸಚಿವ ರಹೀಖಾನ್
KARNATAKA

BIG NEWS : ರಾಜ್ಯದಾದ್ಯಂತ ಶೀಘ್ರವೇ `ಏಕರೀತಿಯ ತೆರಿಗೆ ವ್ಯವಸ್ಥೆ’ ಜಾರಿ : ಸಚಿವ ರಹೀಖಾನ್

By kannadanewsnow5727/11/2024 11:07 AM

ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರಪಾಲಿಕೆಯ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, ರಾಜ್ಯದಾದ್ಯಂತ ಏಕರೀತಿಯ ಕರವಸೂಲಾತಿಗೆ ಹೊಸ ಕಾಯ್ದೆಯೊಂದನ್ನು ಮುಂದಿನ ಒಂದು ತಿಂಗಳೊಳಗಾಗಿ ಜಾರಿಗೊಳಿಸಲಾಗುವುದು ಎಂದು ಮಾನ್ಯ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂಖಾನ್ ಅವರು ಹೇಳಿದರು.

ಅವರು ಇಂದು ಶಿವಮೊಗ್ಗ ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳ ಉಪಸ್ಥಿತಿಯಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಬಹುತೇಕ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಇತ್ತೀಚಿನ ಕೆಲವು ದಶಕಗಳಿಂದೀಚೆಗೆ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ಕರ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿರುವುದಾಗಿ ಅವರು ನುಡಿದರು.

ಜಿಲ್ಲೆಯ ಮಹಾನಗರಪಾಲಿಕೆಯಲ್ಲಿ ಕೊರತೆಯಿರುವ ಹುದ್ದೆಗಳಲ್ಲಿ ಕೆಲವು ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಅಲ್ಲದೇ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ 38ಪೌರಕಾರ್ಮಿಕರ ನೇರನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಅವರು ಸಂಬAಧಿಸಿದ ಮುಖ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ಕರವಸೂಲಾತಿಗೆ ಸಂಬAಧಿಸಿದAತೆ ಸಿಬ್ಬಂಧಿಗಳ ಕೊರತೆ ಇರುವ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸ್ವಯ ಸಹಾಯ ಗುಂಪುಗಳ ಪ್ರತಿನಿಧಿಗಳ ನೆರವನ್ನು ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.

ನಗರ ಮತ್ತು ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳಲ್ಲಿ ಸ್ಥಳೀಯ ಸಂಸ್ಥೆಗೆ ಸಂಬAಧಿಸಿದ ವಿಶಾಲವಾದ ಸ್ವತ್ತುಗಳಿದ್ದು, ವಾಣಿಜ್ಯ ಸಂಕೀರ್ಣ ನಿರ್ಮಿಸಿ, ನಿರ್ವಹಿಸಲು ಉತ್ಸುಕರಿದ್ದು, ಕ್ರಿಯಾಯೋಜನೆ ತಯಾರಿಸಿ, ಪ್ರಸ್ತಾವನೆ ಸಲ್ಲಿಸಿದಲ್ಲಿ ಸರ್ಕಾರದಿಂದ ಅಗತ್ಯ ಹಣಕಾಸಿನ ನೆರವನ್ನು ಒದಗಿಸಲಾಗುವುದು ಎಂದರು.

ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ 180ಇಂದಿರಾ ಕ್ಯಾಂಟೀನ್‌ಗಳನ್ನು ಮಂಜೂರು ಮಾಡಿ, ಜನಸಾಮಾನ್ಯರ ಹಸಿವು ಇಂಗಿಸುವ ಕಾರ್ಯ ಮಾಡಿದ್ದರು. ಪ್ರಸ್ತುತ ಸಂದರ್ಭದಲ್ಲಿಯೂ ಪುನಃ 180ಇಂದಿರಾ ಕ್ಯಾಂಟೀನುಗಳನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿವೆ ಎಂದ ಅವರು, ಕೆಲವು ಕ್ಯಾಂಟೀನುಗಳಲ್ಲಿ ನಿರ್ವಹಣೆ ಸರಿಯಾಗಿ ಆಗದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿವೆ. ಇದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ ಮಾನ್ಯ ಮುಖ್ಯಮಂತ್ರಿಗಳ ಕನಸಿನ ಯೋಜನೆಯ ಅನುಷ್ಠಾನದಲ್ಲಿ ವ್ಯತ್ಯಯಗಳು ಕಂಡುಬAದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದರು.

ಆಹಾರ ವಿತರಣೆಯಲ್ಲಿಯೂ ತಪ್ಪು ದಾಖಲಾತಿಗಳ ನಿರ್ವಹಣೆ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಇಲ್ಲಿಯೂ ದೂರುಗಳ ಕೇಳಿ ಬಂದಲ್ಲಿ ಕ್ಯಾಂಟೀನ್ ನಿರ್ವಹಣಾ ಗುತ್ತಿಗೆ ಸಂಸ್ಥೆಗಳಿಗೆ ನೀಡಿರುವ ಪರವಾನಿಗೆಯನ್ನು ಹಿಂಪಡೆಯಲಾಗುವುದಲ್ಲದೇ ಸಂಬAಧಿಸಿದ ಇಲಾಖಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು. ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಉದ್ಧೇಶಿತ ಯೋಜನೆಗಳಿಗೆ ಬಳಸಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅನುದಾನ ಸರ್ಕಾರಕ್ಕೆ ಹಿಂದಿರುಗಿ ಹೋಗುವ ಸಾಧ್ಯತೆ ಇದೆ ಎಂದವರು ನುಡಿದರು.

ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಹಾಗೂ ಘಟಕಗಳ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಅನುದಾನವನ್ನು ಸಕಾಲದಲ್ಲಿ ಬಳಸುವಂತೆ ಕಳೆದ ಆರು ತಿಂಗಳ ಹಿಂದೆಯೇ ಸೂಚನೆ ನೀಡಲಾಗಿದೆ. ಆದಾಗ್ಯೂ ಅನುದಾನ ಬಳಸದೇ ಬಾಕಿ ಉಳಿಸಿಕೊಂಡಿರುವುದು ಸರಿಯಲ್ಲ. ಕೂಡಲೇ ಹಣ ಬಳಕೆ ಮಾಡಿ ವರದಿ ನೀಡುವಂತೆ ಸಚಿವರು ಸೂಚಿಸಿದರು.  ನಗರ ಮತ್ತು ಪಟ್ಟಣ ಪ್ರದೇಶದಲ್ಲಿನ ಎಲ್ಲಾ ಶಾಲೆಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

BIG NEWS : ರಾಜ್ಯದಾದ್ಯಂತ ಶೀಘ್ರವೇ `ಏಕರೀತಿಯ ತೆರಿಗೆ ವ್ಯವಸ್ಥೆ' ಜಾರಿ : ಸಚಿವ ರಹೀಖಾನ್ BIG NEWS: 'Uniform tax regime' to be implemented across the state soon: Minister Rahi Khan
Share. Facebook Twitter LinkedIn WhatsApp Email

Related Posts

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM1 Min Read

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM1 Min Read

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM2 Mins Read
Recent News

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM

BIG NEWS : ಚಿಕ್ಕಮಗಳೂರಲ್ಲಿ ಸಾಕು ನಾಯಿಗಳಿಂದ ಡೆಡ್ಲಿ ಅಟ್ಯಾಕ್ : 7 ವರ್ಷದ ಬಾಲಕನ ಸ್ಥಿತಿ ಗಂಭೀರ!

20/04/2026 2:01 PM
State News
KARNATAKA

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

By kannadanewsnow0920/04/2026 2:23 PM KARNATAKA 1 Min Read

ಹುಬ್ಬಳ್ಳಿ: ಕಾನೂನು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು—ಶಿಕ್ಷಕರು, ಶಿಕ್ಷಕೇತರರು, ನ್ಯಾಯವಾದಿಗಳು ಹಾಗೂ ವಿದ್ಯಾರ್ಥಿಗಳು—ಜನಸಾಮಾನ್ಯರಲ್ಲಿ ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಅರಿವು ಮೂಡಿಸುವ…

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM

BIG NEWS : ಚಿಕ್ಕಮಗಳೂರಲ್ಲಿ ಸಾಕು ನಾಯಿಗಳಿಂದ ಡೆಡ್ಲಿ ಅಟ್ಯಾಕ್ : 7 ವರ್ಷದ ಬಾಲಕನ ಸ್ಥಿತಿ ಗಂಭೀರ!

20/04/2026 2:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.