ಮಂಡ್ಯ : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅಪ್ಪಟ ಅಭಿಮಾನಿ ಮಹದೇವು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮದ್ದೂರು ತಾಲೂಕಿನ ದೇವೇಗೌಡನದೊಡ್ಡಿ ಗ್ರಾಮದ ಮಹದೇವು ಆತ್ಮಹತ್ಯೆಗೆ ಶರಣಾಗಿದ್ದು, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದಲ್ಲಿ ಇ ಘಟನೆ ನಡೆದಿದೆ.
ಎಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವವರೆಗೂ ಚಪ್ಪಲಿ ತೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಅಲ್ಲದೇ ಮೃತ ಮಹದೇವು ಜೆಡಿಎಸ್ ಪಕ್ಷದ ಕಾರ್ಯಕರ್ತ ಕೂಡ ಆಗಿದ್ದರು. ಅಭಿಮಾನಿ ಮಹದೇವು ನಿಧನಕ್ಕೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದು ಇಂದು ಮೃತ ಅಭಿಮಾನಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಕುಟುಂಬದ ಸದಸ್ಯರಿಗೆ ಜೆಡಿಎಸ್ ನಾಯಕರು ಸಾಂತ್ವನ ನೀಡಲಿದ್ದಾರೆ.








