ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಹಲವು ಬಿಜೆಪಿ ನಾಯಕರು ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಬಿಜೆಪಿ ಬಂಡಾಯ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದಾರೆ.ಹೌದು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ನಿವಾಸದಲ್ಲಿ ಬಿಜೆಪಿ ಅಸಮಾಧಾನಿತ ನಾಯಕರ ಸಭೆ ನಡೆದಿದೆ.
ಈ ಒಂದು ಸಭೆಯಲ್ಲಿ ಪ್ರಮುಖವಾದಂತಹ ನಿರ್ಧಾರ ಕೈಗೊಂಡಿದ್ದು, ಮೈಸೂರು ದಸರಾ ಹಬ್ಬ ಮುಗಿದ ಬಳಿಕ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮದ ಕುರಿತಾಗಿ ಬಸವಕಲ್ಯಾಣದಿಂದ ಬಳ್ಳಾರಿಯ ವರೆಗೆ ಪಾದಯಾತ್ರೆ ನಡೆಸಲು ಬಿಜೆಪಿಯ ಅಸಮಾಧಾನಿತ ನಾಯಕರು ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಬಸವಕಲ್ಯಾಣದಿಂದ ಬಳ್ಳಾರಿಯವರಿಗೆ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ಮಾಡಿಕೊಂಡಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ತಂಡದಿಂದ ಈ ಒಂದು ನಿರ್ಧಾರ ಕೈಗೊಳ್ಳಲಾಗಿದೆ. ಪಾದಯಾತ್ರೆಯ ರೂಪುರೆಷೆಯ ಬಗ್ಗೆ ಪ್ಲಾನ್ ಮಾಡಲಾಗಿದ್ದು, ಈ ಕುರಿತು ಬಸನಗೌಡ ಪಾಟೀಲ ಯತ್ನಾಳ ಮತ್ತು ಟೀಂ ಹೈಕಮಾಂಡ್ ಗೆ ಪ್ಲಾನ್ ಸಲ್ಲಿಸಲಿದ್ದಾರೆ.
ದಸರಾ ಬಳಿಕ ಬಿಜೆಪಿಯಿಂದ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ಮಾಡಿಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತ ಕೋಟ್ಯಂತರ ರೂಪಾಯಿ ಅಕ್ರಮದ ವಿರುದ್ಧ ಈ ಒಂದು ಪಾದಯಾತ್ರೆ ಆಯೋಜನೆ ಮಾಡಲಾಗಿದೆ. ಈ ಈ ಒಂದು ಪಾದಯಾತ್ರೆ ಬಸವಕಲ್ಯಾಣದಿಂದ ಬಳ್ಳಾರಿಯವರಿಗೆ ಹಮ್ಮಿಕೊಳ್ಳಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.