ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಈ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ರಿಟ್ ಅರ್ಜಿ ಸಲ್ಲಿಸಿತ್ತು. ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು .ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠವು ಇಂದು ತೀರ್ಪು ಪ್ರಕಟಿಸಲಿದೆ.
‘CBI’ ಎಂಟ್ರಿ ಆದ್ರೆ ಸರ್ಕಾರಕ್ಕೆ ಮತ್ತೆ ಸಂಕಷ್ಟ?
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಬಿಐ ಎಂಟ್ರಿಯಾದ್ರೆ ಈ ಪ್ರಕರಣದಲ್ಲಿ ಮತ್ತೆ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಲಿದೆ. ಪ್ರಕರಣದ ತನಿಖೆ ಸಿಬಿಐಗೆ ಹೋದ್ರೆ, ಆಗ ತನಿಖೆ ಆರ್ಥಿಕ ಇಲಾಖೆ ತನಕ ಬರತ್ತೆ.ಒಂದು ವೇಳೆ ಕೇಸ್ ಸಿಬಿಐ ಗೆ ವರ್ಗಾವಣೆಯಾದರೆ ಬಿ ನಾಗೇಂದ್ರ & ಈ ಪ್ರಕರಣದಲ್ಲಿ ಭಾಗಿಯಾದ ಹಲವರಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿಯಾಗಲಿದೆ.
ಈ ಪ್ರಕರಣದಲ್ಲಿ 89 ಕೋಟಿ ದುರ್ಬಳಕೆ ಕೇಸ್ ಗೆ ಸಂಬಂಧಪಟ್ಟಂತೆ ಇಂದು ಮಹತ್ವದ ತೀರ್ಪು ಹೊರಬೀಳುವ ಸಾಧ್ಯತೆಗಳಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವ ಬಗ್ಗೆ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.ಸರ್ಕಾರದ ಖಜಾನೆ ಹಣ ವರ್ಗಾವಣೆ ಮಾಡಿದ್ದು ಯಾರು.? ಕೋಟಿ ಕೋಟಿ ಟ್ರಾನ್ಸಫರ್ ಗೆ ಅನುಮತಿ ನೀಡಿದ್ದು ಯಾರು? ಎನ್ನುವ ಎಲ್ಲಾ ಅಂಶಗಳು ಬಹಿರಂಗವಾಗಲಿದೆ.