ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಶಹಬಾದ್ ತಾಲೂಕಿನ ಮುಟ್ಟಗ ಗ್ರಾಮದಲ್ಲಿ ಅಂಬಿಗರ ಚೌಡಯ್ಯ ಮೂರ್ತಿಯನ್ನು ಕಿಡಿಗೇಡಿಗಳು ಭಗನಗೊಳಿಸಿರುವ ಘಟನೆ ವರದಿಯಾಗಿದೆ ಕಲೆನಿಂದ ಮೂರ್ತಿಯ ಕೈ ಕಟ್ ಮಾಡಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.
ಮುತ್ತಗಿ ಗ್ರಾಮದಲ್ಲಿ ಸದ್ಯಕ್ಕೆ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬಿಗಿ ಭಧ್ರತೆ ಕೈಗೊಂಡಿದ್ದಾರೆ. ಘಟನೆ ಕುರಿತಂತೆ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅಂಬಿಗರ ಚೌಡಯ್ಯ ಮೂರ್ತಿಯನ್ನು ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.