ಕೊಪ್ಪಳ : ಬೇಸಿಗೆಯ ಬಿಸಿಲಿನಿಂದ ಬಸವಳೆದಿದ್ದ ಜನರಿಗೆ ಇದೀಗ ವರುಣ ತಂಪಿರೆದಿದ್ದು ಇಂದಿನಿಂದ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದೀಗ ಚಿತ್ರದುರ್ಗ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ವರುಣ ಅಬ್ಬರಿಸುತ್ತಿದ್ದು ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ.
ಹೌದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಬಿರುಗಾಳಿ ಹಾಗೂ ಜೋರಾದ ಮಳೆಯಿಂದ ವಿದ್ಯುತ್ ಕಂಬಗಳು ದೊರೆಗೆ ಉರಳಿವೆ ಇನ್ನು ಕೆಲವೇ ಮರಗಳು ಸಹ ಧರೆಗೆ ಉರುಳಿವೆ ಎಂದು ತಿಳಿದು ಬಂದಿದೆ. ಬಿಂಜವಾಡಗಿ ಘಟ್ಟಿಗನೂರು ಸುತ್ತಮುತ್ತ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ.
ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಬಿರುಗಾಳಿ ಹಾಗೂ ಮಳೆಗೆ ಮನೆಯ ಮೇಲ್ಚಾವಣಿಗಳು ಹಾರಿ ಹೋಗಿರುವ ಘಟನೆ ನಡೆದಿದೆ. ಗುಡುಗು ಮಿಂಚು ಸಹಿತ ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಕಳೆದ ಒಂದು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ ಗುಡುಗು ಮಿಂಚು ಸಹಿತ ಮಳೆ ಸುರಿಯುತ್ತಿದೆ. ಬಿಸಿಲಿನ ಜೋಳದಿಂದ ಬಂದಿದ್ದ ಜನರಿಗೆ ವರುಣ ತಂಪರೆದಿದ್ದು ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿವೆ.